ಹೊಸದಿಗಂತ ಡಿಜಿಟಲ್ ಡೆಸ್ಕ್:
ಪ್ರಯಾಗ್‌ರಾಜ್‌ನ ಮಹಾ ಕುಂಭಮೇಳದಲ್ಲಿ ಇಂದು ಮುಂಜಾನೆ ಸಂಭವಿಸಿದ ಕಾಲ್ತುಳಿತದಲ್ಲಿ ಹಲವರು ಸಾವಿಗೀಡಾದ ಸುದ್ದಿ ತಿಳಿದು ಸಿಎಂ ಸಿದ್ದರಾಮಯ್ಯ ತೀವ್ರ ವಿಷಾದ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಎಕ್ಸ್‌ನಲ್ಲಿ ಅವರು ಪೋಸ್ಟ್ ಮಾಡಿದ್ದಾರೆ.
ಪೋಸ್ಟ್‌ನಲ್ಲಿ ಮೃತರ ಆತ್ಮಗಳಿಗೆ ಶಾಂತಿ ಸಿಗಲೆಂದು ಪ್ರಾರ್ಥಿಸುತ್ತೇನೆ. ಘಟನೆಯಲ್ಲಿ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿರುವವರು ಶೀಘ್ರ ಗುಣಮುಖರಾಗಲಿ ಎಂದು ಹಾರೈಸಿದ್ದಾರೆ.
ಕಾಲ್ತುಳಿತದಲ್ಲಿ ರಾಜ್ಯದ ಕೆಲವರು ಗಾಯಗೊಂಡಿರುವ ಮಾಹಿತಿಯಿದೆ. ಅವರೆಲ್ಲರನ್ನು ಕ್ಷೇಮವಾಗಿ ರಾಜ್ಯಕ್ಕೆ ಕರೆತರಲು ಅಧಿಕಾರಿಗಳನ್ನು ನಿಯೋಜಿಸಲಾಗಿದೆ. ನಮ್ಮವರ ರಕ್ಷಣೆಗೆ ಸರ್ಕಾರ ಎಲ್ಲಾ ರೀತಿಯ ಪ್ರಯತ್ನವನ್ನು ನಡೆಸುತ್ತಿದೆ. ಕುಂಭಮೇಳದಲ್ಲಿ ಪಾಲ್ಗೊಂಡಿರುವ ಕನ್ನಡಿಗರು ಸ್ವಲ್ಪ ಜಾಗರೂಕತೆಯಿಂದಿರಿ ಎಂದು ಮನವಿ ಮಾಡಿಕೊಂಡಿದ್ದಾರೆ.
Saddened by the tragic stampede at the Maha Kumbh Mela in Prayagraj this morning, which claimed several lives.
My condolences to the bereaved families, and prayers for the departed souls. Wishing a speedy recovery to the injured.
Reports indicate some from our state are among… pic.twitter.com/xDIJYqZkci
— Siddaramaiah (@siddaramaiah) January 29, 2025