ಹೊಸದಿಗಂತ ಡಿಜಿಟಲ್ ಡೆಸ್ಕ್:
ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿ ಹಿನ್ನೆಲೆ ಕಾಶ್ಮೀರ ಪ್ರವಾಸಕ್ಕೆ ತೆರಳಿರುವ ಕನ್ನಡಿಗರನ್ನು ಸುರಕ್ಷಿತವಾಗಿ ಅವರವರ ಊರುಗಳಿಗೆ ತಲುಪಿಸಲು ಸಕಲ ವ್ಯವಸ್ಥೆ ಕೈಗೊಳ್ಳಲಾಗಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅಭಯ ನೀಡಿದ್ದಾರೆ.
ಮಂಗಳವಾರ ರಾತ್ರಿಯೇ ರಾಮ್ ಮೋಹನ್ ನಾಯ್ಡು ಅವರೊಂದಿಗೆ ಮಾತುಕತೆ ನಡೆಸಿದ್ದೇನೆ. ಕನ್ನಡಿಗರನ್ನು ಸುರಕ್ಷಿತವಾಗಿ ಮರಳಿ ಕರೆತರಲು ವ್ಯವಸ್ಥೆ ಕಲ್ಪಿಸಲಾಗಿದೆ. ವಿಶೇಷ ವಿಮಾನ ವ್ಯವಸ್ಥೆ ಮಾಡಲಾಗಿದೆ. ಇನ್ನೆರೆಡು ದಿನಗಳಲ್ಲಿ ಎಲ್ಲ ಪ್ರವಾಸಿಗರನ್ನೂ ಅವರವರ ಸ್ವಸ್ಥಾನಗಳಿಗೆ ಸುರಕ್ಷಿತವಾಗಿ ಮರಳಿಸಲಾಗುತ್ತದೆ ಎಂದು ತಿಳಿಸಿದ್ದಾರೆ.