ಮತ್ತೊಂದು ಕಾಲೇಜು ಹಾಸ್ಟೆಲ್‌ನಲ್ಲಿ ವಿದ್ಯಾರ್ಥಿನಿಯರ ವಿಡಿಯೋ ಲೀಕ್

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಇತ್ತೀಚೆಗಷ್ಟೇ ಚಂಡೀಗಢದಲ್ಲಿ ಯುವತಿಯೊಬ್ಬಳು ಹಾಸ್ಟೆಲ್‌ನಲ್ಲಿರುವ ವಿದ್ಯಾರ್ಥಿನಿಯರ ವಿಡಿಯೋ ಚಿತ್ರೀಕರಣ ಮಾಡಿ ವಿಚಾರ ತಾರಕಕ್ಕೇರಿರುವ ಘಟನೆ ಮರೆಯುವ ಮುನ್ನವೇ ಇಂತಹದ್ದೇ ಮತ್ತೊಂದು ಘಟನೆ ಬೆಳಕಿಗೆ ಬಂದಿದೆ. ಉತ್ತರ ಪ್ರದೇಶದ ಕಾನ್ಪುರದ ಹೆಣ್ಣುಮಕ್ಕಳ ಹಾಸ್ಟೆಲ್‌ನಲ್ಲಿ ಸ್ವೀಪರ್ ಆಗಿ ಕೆಲಸ ಮಾಡುತ್ತಿದ್ದ ವ್ಯಕ್ತಿಯೊಬ್ಬ ಅಲ್ಲಿನ ಹುಡುಗಿಯರ ವಿಡಿಯೋಗಳನ್ನು ರಹಸ್ಯವಾಗಿ ಚಿತ್ರೀಕರಿಸಿದ್ದಾರೆ.

ಈ ವಿಷಯ ತಿಳಿದ ವಿದ್ಯಾರ್ಥಿನಿಯರು ಪೊಲೀಸರಿಗೆ ದೂರು ನೀಡಿದ ಬಳಿಕ ಈ ಘಟನೆ ಬೆಳಕಿಗೆ ಬಂದಿದೆ. ಪೊಲೀಸರ ಪ್ರಕಾರ ತುಳಸಿನಗರದ ಹೆಣ್ಣುಮಕ್ಕಳ ಹಾಸ್ಟೆಲ್‌ನಲ್ಲಿ 60ಕ್ಕೂ ಹೆಚ್ಚು ವಿದ್ಯಾರ್ಥಿನಿಯರು ಇದ್ದಾರೆ. ರಿಷಿ ಎಂಬ ವ್ಯಕ್ತಿ ಸುಮಾರು ಏಳು ವರ್ಷಗಳಿಂದ ಹಾಸ್ಟೆಲ್‌ನಲ್ಲಿ ಸ್ವೀಪರ್ ಆಗಿ ಕೆಲಸ ಮಾಡುತ್ತಿದ್ದು, ಈ ಕ್ರಮದಲ್ಲಿ ಅಲ್ಲಿನ ಹುಡುಗಿಯರಿಗೆ ಸಂಬಂಧಿಸಿದ ಕೆಲವು ಅಸಭ್ಯ ವಿಡಿಯೋಗಳನ್ನು ತೆಗೆದಿದ್ದಾನೆ. ಕಳೆದ ಗುರುವಾರ ಸ್ನಾನ ಮಾಡುತ್ತಿದ್ದ ವೇಳೆ ಬಾತ್ ರೂಂ ಬಾಗಿಲು ಮುರಿದ ಜಾಗದಲ್ಲಿ ರಹಸ್ಯವಾಗಿ ಮೊಬೈಲ್ ಇಟ್ಟು ವಿಡಿಯೋ ಮಾಡುತ್ತಿರುವುದನ್ನು ಯುವತಿಯೊಬ್ಬಳು ನೋಡಿದ್ದಾಳೆ.

ವೀಡಿಯೋ ಚಿತ್ರೀಕರಣ ಮಾಡುವಾಗ ಸ್ವೀಪರ್ ಸಿಕ್ಕಿ ಬಿದ್ದಾಗ ಅಸಲಿ ವಿಷಯ ಬೆಳಕಿಗೆ ಬಂದಿದೆ. ಘಟನೆ ಕುರಿತು ಹಾಸ್ಟೆಲ್ ಬಾಲಕಿಯರು ಸ್ಥಳೀಯ ಪೊಲೀಸರಿಗೆ ದೂರು ನೀಡಿದ್ದಾರೆ. ಆರೋಪಿ ಇದೇ ರೀತಿ ಇತರ ಕೆಲವು ಹುಡುಗಿಯರ ವಿಡಿಯೋಗಳನ್ನು ಸಹ ತೆಗೆದುಕೊಂಡಿದ್ದಾರೆ ಎಂದು ಅವರು ಶಂಕಿಸಲಾಗಿದೆ. ಪೊಲೀಸ್ ಠಾಣೆ ಎದುರು ಬಾಲಕಿಯರು ಪ್ರತಿಭಟನೆ ನಡೆಸಿ ಆರೋಪಿ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!