‘ಕಾಂತಾರ 2’ ಚಿತ್ರದ ಮುಹೂರ್ತ ದಿನಾಂಕ ಫಿಕ್ಸ್!

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

‘ಕಾಂತಾರ’ ಮೂಲಕ ಇಡೀ ವಿಶ್ವದಲ್ಲೇ ಹೊಸ ಇತಿಹಾಸ ನಿರ್ಮಿಸಿದ ನಟ, ನಿರ್ದೇಶಕ ರಿಷಬ್ ಶೆಟ್ಟಿ , ಇದೀಗ ಪಾರ್ಟ್ ೨ ರ ಪ್ರೀಕ್ವೆಲ್ ಸ್ಕ್ರಿಪ್ಟ್ ಅನ್ನು ಬಹುತೇಕ ಮುಗಿಸಿದ್ದಾರಂತೆ.

ಇದೀಗ ಶೂಟಿಂಗ್ (Shooting) ಸ್ಥಳಗಳನ್ನೂ ಅವರು ಹುಡುಕುತ್ತಿದ್ದು, ಈ ಎಲ್ಲವನ್ನೂ ಮುಗಿಸಿಕೊಂಡು ಆಗಸ್ಟ್ ನಲ್ಲಿ ಚಿತ್ರಕ್ಕೆ ಮುಹೂರ್ತ ಮಾಡಲಿದ್ದಾರೆ ಎನ್ನುವುದು ಅವರ ತಂಡದಿಂದ ಸಿಕ್ಕಿರುವ ಮಾಹಿತಿ.

ಕಾಂತಾರ ಸಿನಿಮಾದ ಮುಹೂರ್ತ ಕಳೆದ ಬಾರಿ ಯಾವ ದೇವಸ್ಥಾನದಲ್ಲಿ ಆಗಿತ್ತೋ, ಮತ್ತೆ ಅದೇ ದೇವಸ್ಥಾನದಲ್ಲೇ ಕಾಂತಾರ ಪ್ರಿಕ್ವೆಲ್ (Prequel) ಮುಹೂರ್ತ ಆಗಲಿದೆಯಂತೆ. ಆನೆಗುಡಿ (Anegudi) ಗಣಪತಿ ದೇವಸ್ಥಾನದಲ್ಲೇ ಮುಹೂರ್ತ ಮಾಡಲು ಸಿದ್ದತೆ ಮಾಡಿಕೊಂಡಿದ್ದಾರೆ ಎಂದು ಹೇಳಲಾಗುತ್ತಿದೆ. ಆಗಸ್ಟ್ 27ನೇ ತಾರೀಖು ಕಾಂತಾರ ಪ್ರಕ್ವೆಲ್ ಗೆ ಮಹೂರ್ತ ನಿಗದಿಯಾಗಿದೆ. ಆಗಸ್ಟ್ ನಲ್ಲಿ ಮುಹೂರ್ತವಾದರೆ ಸೆಪ್ಟೆಂಬರ್ ತಿಂಗಳಿಂದ ಚಿತ್ರೀಕರಣ ಆರಂಭಿಸಲಿದ್ದಾರೆ .

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!