Monday, November 28, 2022

Latest Posts

ಉತ್ತರ ಭಾರತದಲ್ಲೂ ಕಾಂತಾರ ಅಬ್ಬರ: ಬಾಲಿವುಡ್ ನಲ್ಲಿ ಮೊದಲ ದಿನ ಗಳಿಸಿದ್ದೆಷ್ಟು?

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಕನ್ನಡದಲ್ಲಿ ಅಬ್ಬರಿಸುತ್ತಿರುವ ಕಾಂತಾರ ಇದೀಗ ಬೇರೆ ಭಾಷೆಗಳಲ್ಲೂ ಬಿಡುಗಡೆಯಾಗಿದೆ. ಚಿತ್ರವನ್ನು ನೋಡಿ ಮೆಚ್ಚುಗೆ ಎಲ್ಲೆಡೆ ವ್ಯಕ್ತವಾಗುತ್ತಿದೆ.
ರಿಷಬ್ ಶೆಟ್ಟಿ ನಟಿಸಿ, ನಿರ್ದೇಶನ ಮಾಡಿರುವ ಕಾಂತಾರ ಸಿನಿಮಾ ಶುಕ್ರವಾರ ಹಿಂದಿ ಭಾಷೆಯಲ್ಲಿ ಬಿಡುಗಡೆಯಾಗಿದೆ. ಸುಮಾರು 2500ಕ್ಕೂ ಹೆಚ್ಚಿನ ಸ್ಕ್ರೀನ್ ಗಳಲ್ಲಿ ರಿಲೀಸ್ ಆಗಿದೆ. ಇದೀಗ ಚಿತ್ರದ ಮೊದಲ ದಿನ ಕಲೆಕ್ಷನ್ ಬಗ್ಗೆ ಮಾಹಿತಿ ಲಭ್ಯವಾಗಿದೆ.
ಬಾಲಿವುಡ್ ಟ್ರೇಡ್ ಅನಲಿಸ್ಟ್ ತರಣ್ ಆದರ್ಶ್ ಅವರು ಕಾಂತಾರ ಹಿಂದಿ ಅವತರಣಿಕೆಯ ಮೊದಲ ದಿನದ ಕಲೆಕ್ಷನ್ ವರದಿಯ ಬಗ್ಗೆ ಮಾಹಿತಿ ನೀಡಿದ್ದಾರೆ.ಮೊದಲ ದಿನ 1.27 ಕೋಟಿ ರೂ ಗಳಿಸಿದೆ ಎಂದು ಟ್ವೀಟ್ ಮಾಡಿದ್ದಾರೆ.
ಕಾಂತಾರ ಸಿನಿಮಾ ಇತ್ತೀಚೆಗೆ ತೆರೆಗೆ ಬಂದ ಚಿರಂಜೀವಿ-ಸಲ್ಮಾನ್ ಖಾನ್ ನಟನೆಯ ಗಾಡ್ ಫಾದರ್ ಚಿತ್ರಕ್ಕಿಂತ ಹೆಚ್ಚಿನ ಮೊದಲ ದಿನದ ಕಲೆಕ್ಷನ್ ಮಾಡಿದೆ ಎನ್ನಲಾಗಿದೆ.
ಈ ಮೂಲಕ ಕಾಂತಾರದ ವಿಜಯ ಯಾತ್ರೆ ಉತ್ತರ ಭಾರತದತ್ತ ಮುನ್ನುಗ್ಗುತ್ತಿದ್ದು ಅಬ್ಬರಿಸುತ್ತಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!