ಹೊಸದಿಗಂತ ಡಿಜಿಟಲ್ ಡೆಸ್ಕ್:
‘ಕಾಂತಾರ: ಚಾಪ್ಟರ್ 1’ ಸಿನಿಮಾದ ಟ್ರೇಲರ್ ರಿಲೀಸ್ ಆಗಿದೆ. ಈ ಟ್ರೇಲರ್ ಮೆಚ್ಚುಗೆ ಪಡೆದಿದೆ. ಈ ಚಿತ್ರದಲ್ಲಿ ರುಕ್ಮಿಣಿ ವಂಸತ್ ಯುವರಾಣಿ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಅವರ ಸೌಂದರ್ಯಕ್ಕೆ ಅನೇಕರು ಫಿದಾ ಆಗಿದ್ದಾರೆ.
ಕನಕವತಿ ಪಾತ್ರದಲ್ಲಿ ರುಕ್ಮಿಣಿ ವಸಂತ್ ಕಾಣಿಸಿಕೊಂಡಿದ್ದಾರೆ. ಟ್ರೇಲರ್ ಉದ್ದಕ್ಕೂ ರುಕ್ಮಿಣಿ ವಸಂತ್ ಅವರು ಮಿಂಚಿದ್ದಾರೆ. ಅವರ ಪಾತ್ರಕ್ಕೆ ಸಾಕಷ್ಟು ತೂಕ ಇರುವ ಸೂಚನೆ ಟ್ರೇಲರ್ನಲ್ಲಿ ಸಿಕ್ಕಿದೆ. ರುಕ್ಮಿಣಿ ವಸಂತ್ ರಾಣಿಯ ಪಾತ್ರದಲ್ಲಿ ಅದ್ಭುತವಾಗಿ ಕಾಣಿಸಿದ್ದಾರೆ.
ಟ್ರೇಲರ್ನಲ್ಲಿ ರುಕ್ಮಿಣಿ ವಸಂತ್ ಅವರು ವಾರಿಯರ್ ಆಗಿಯೂ ಕಾಣಿಸಿಕೊಂಡಿದ್ದಾರೆ ಎನ್ನಬುದು. ಅವರು ಯುದ್ಧ ಭೂಮಿಗೆ ಇಳಿದು ಹೋರಾಡುತ್ತಾರೆ. ಅವರು ಆ್ಯಕ್ಷನ್ ದೃಶ್ಯಗಳ ಮೂಲಕ ಗಮನ ಸೆಳೆಯುವ ಸೂಚನೆಯನ್ನು ನೀಡಲಾಗಿದೆ.
ಕಾಂತಾರ ಚಾಪ್ಟರ್-1: ರುಕ್ಮಿಣಿ ವಸಂತ್ ಅಂದಕ್ಕೆ ಮನಸೋತ ಫ್ಯಾನ್ಸ್
