ಕನ್ನಡದಲ್ಲಿ ಅದ್ಭುತ ಯಶಸ್ಸು: ಹಿಂದಿಯಲ್ಲೂ ತೆರೆಕಾಣಲಿದೆ ಕಾಂತಾರ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌
ರಿಷಬ್ ಶೆಟ್ಟಿ ನಿರ್ದೇಶಿಸಿ ನಟಿಸಿರುವ ಕಾಂತಾರ- ಒಂದು ದಂತಕತೆ ಚಿತ್ರ ಅಭೂತಪೂರ್ವ ಯಶಸ್ಸನ್ನು ದಾಖಲಿಸಿದೆ. ಕಾಂತಾರ ಪ್ರದರ್ಶನ ಕಾಣುತ್ತಿರುವ ಥಿಯೇಟರ್‌ಗಳಲ್ಲಿ ಚಿತ್ರಪ್ರೇಮಿಗಳು ಮುಗಿಬಿದ್ದು ಚಿತ್ರ ವೀಕ್ಷಿಸುತ್ತಿದ್ದಾರೆ.
ಚಿತ್ರಕ್ಕೆ ಸಿಕ್ಕ ಅತ್ಯುತ್ತಮ ಪ್ರತಿಕ್ರಿಯೆ ಮತ್ತು ಹೆಚ್ಚುತ್ತಿರುವ ಜನಪ್ರಿಯತೆಯನ್ನು ಪರಿಗಣಿಸಿರುವ ಹೊಂಬಾಳೆ ಫಿಲ್ಮ್ಸ್ ಚಿತ್ರ ಹಿಂದಿ ಆವೃತ್ತಿಯ ಟ್ರೇಲರ್‌ ಅನ್ನು ಶೀಘ್ರದಲ್ಲೇ ಬಿಡುಗಡೆ ಮಾಡುವುದಾಗಿ ಘೋಷಿಸಿದ್ದಾರೆ.
ಕಾಂತಾರ ಚಿತ್ರಕ್ಕೆ ಪರಭಾಷೆಯ ಪ್ರೇಕ್ಷಕರಿಂದ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಆದ್ದರಿಂದ ಚಿತ್ರವನ್ನು ಡಬ್ಬಿಂಗ್ ಮಾಡಲು ಬೇಡಿಕೆ ಹೆಚ್ಚಿದೆ. ಆದ್ದರಿಂದ ಬಹುಭಾಷೆಗಳಲ್ಲಿ ಡಬ್ಬಿಂಗ್ ಮಾಡಿ, ತೆರೆಗೆ ತರಲು ಸಿದ್ಧತೆ ನಡೆಸಲಾಗಿದೆ. ಚಿತ್ರದ ನಿರ್ದೇಶಕ ರಿಷಬ್ ಶೆಟ್ಟಿ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಈ ಬಗ್ಗೆ ಮಾಹಿತಿ ನೀಡಿದ್ದಾರೆ.

 

ʼದೈವತ್ವದಿಂದ ಮಂತ್ರಮುಗ್ಧರಾಗಲು ಸಿದ್ಧರಾಗಿ. ʼಕಾಂತಾರʼ ಹಿಂದಿ ಟ್ರೈಲರ್ ಅನ್ನು ಅಕ್ಟೋಬರ್ 9 ರಂದು ಬೆಳಿಗ್ಗೆ 9:10 ಕ್ಕೆ ಬಿಡುಗಡೆ ಮಾಡಲಾಗುವುದು ಎಂದು ಅವರು ಬರೆದುಕೊಂಡಿದ್ದಾರೆ.
ಚಿತ್ರದಲ್ಲಿ ರಿಷಬ್ ಶೆಟ್ಟಿ, ಕಿಶೋರ್, ಅಚ್ಯುತ್ ಕುಮಾರ್, ಪ್ರಮೋದ್ ಶೆಟ್ಟಿ, ಪ್ರಕಾಶ್ ತಿಮುನಾಡ್, ನವೀನ್ ಡಿ ಪಡ್ಲಿ ಮುಂತಾದವರ ತಾರಾಗಣವಿದೆ. ಚಿತ್ರಕ್ಕೆ ಅಜನೀಶ್ ಬಿ ಲೋಕನಾಥ್ ಸಂಗೀತ , ಅರವಿಂದ್ ಎಸ್ ಕಶ್ಯಪ್ ಛಾಯಾಗ್ರಹಣ ಮತ್ತು ಕೆ.ಎಂ.ಪ್ರಕಾಶ್ ಮತ್ತು ಪ್ರತೀಕ್ ಶೆಟ್ಟಿ ಸಂಕಲನ ವಿದೆ. ಕಾಂತಾರ ವಿಜಯ್ ಕಿರಗಂದೂರು ಬಂಡವಾಳ ಹೂಡಿದ್ದಾರೆ. ಚಿತ್ರಕ್ಕೆ ಎಲ್ಲೆಡೆಯಿಂದ ಮೆಚ್ಚುಗೆಯ ಮಾತುಗಳು ಹರಿದು ಬರುತ್ತಿವೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!