ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಕಾಂತಾರ: ಅಧ್ಯಾಯ 1 ಚಿತ್ರದ ತಂಡ ದೆಹಲಿ ಮುಖ್ಯಮಂತ್ರಿ ರೇಖಾ ಗುಪ್ತಾ ಅವರನ್ನು ಮುಖ್ಯಮಂತ್ರಿ ಜನಸೇವಾ ಸದನದಲ್ಲಿ ಭೇಟಿಯಾದರು.
ಈ ಸಂದರ್ಭ ನಟ,ನಿರ್ದೇಶಕ ರಿಷಭ್ ಶೆಟ್ಟಿ ಮತ್ತು ಅವರ ತಂಡದ ಜೊತೆ ಆತ್ಮೀಯವಾಗಿ ಮಾತುಕತೆ ನಡೆಸಿದ ಮುಖ್ಯಮಂತ್ರಿ, ಚಿತ್ರದ ಸಾಂಸ್ಕೃತಿಕ ಹಾಗೂ ಆಧ್ಯಾತ್ಮಿಕ ಮಹತ್ವವನ್ನು ಶ್ಲಾಘಿಸಿದರು.

ಮುಖ್ಯಮಂತ್ರಿ ರೇಖಾ ಗುಪ್ತಾ ತಮ್ಮ ಅಧಿಕೃತ ಸಾಮಾಜಿಕ ಮಾಧ್ಯಮ ಖಾತೆಯಲ್ಲಿ ಕಾಂತಾರ ಚಿತ್ರ ತಂಡದೊಂದಿಗೆ ತೆಗೆದ ಚಿತ್ರವನ್ನು ಹಂಚಿಕೊಂಡು, ಚಿತ್ರದ ಬಗ್ಗೆ ಪ್ರಶಂಸೆ ವ್ಯಕ್ತಪಡಿಸಿದರು.

‘ಇಂದು ಕಾಂತಾರ ಅಧ್ಯಾಯ 1 ಚಿತ್ರದ ನಟ ಮತ್ತು ನಿರ್ದೇಶಕ ರಿಷಭ್ ಶೆಟ್ಟಿ ಹಾಗೂ ಅವರ ತಂಡವನ್ನು ಮುಖ್ಯಮಂತ್ರಿ ಜನಸೇವಾ ಸದನದಲ್ಲಿ ಭೇಟಿಯಾದೆ. ಈ ಚಿತ್ರವು ಭಾರತದ ಆಧ್ಯಾತ್ಮಿಕ ಆಳ ಮತ್ತು ಸಾಂಸ್ಕೃತಿಕ ಶ್ರೀಮಂತಿಕೆಯನ್ನು ಅದ್ಭುತವಾಗಿ ಪ್ರತಿಬಿಂಬಿಸುತ್ತದೆ. ನಮ್ಮ ಸಂಪ್ರದಾಯಗಳ ಸಾರವನ್ನು ಜೀವಂತಗೊಳಿಸುವ ಈ ಚಿತ್ರ, ಭಾರತದ ಪರಂಪರೆಯ ಚೈತನ್ಯವನ್ನು ಜಾಗತಿಕ ವೇದಿಕೆಗೆ ಹೆಮ್ಮೆಯಿಂದ ಕೊಂಡೊಯ್ಯುತ್ತದೆ. ಈ ಗಮನಾರ್ಹ ಸಿನಿಮಾ ಪ್ರಯಾಣದಲ್ಲಿ ಇಡೀ ತಂಡಕ್ಕೆ ಹೃತ್ಪೂರ್ವಕ ಯಶಸ್ಸು ಹಾರೈಸುತ್ತೇನೆ’ ಎಂದು ಬರೆದುಕೊಂಡಿದ್ದಾರೆ.