ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
………………………………………………………………………..
ಹೊಸದಿಗಂತ ಆನ್ ಲೈನ್ ಡೆಸ್ಕ್:
ಟೀಂ ಇಂಡಿಯಾದ ವೇಗದ ಬೌಲರ್ ಜಸ್ಪ್ರೀತ್ ಬೂಮ್ರಾ ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಯಲ್ಲಿ ನೂತನ ದಾಖಲೆ ಸ್ಥಾಪಿಸಿದ್ದಾರೆ. ಅವರು ಭಾರತದ ಮಾಜಿ ಕ್ಯಾಪ್ಟನ್ ಕಪಿಲ್ ದೇವ್ ದಾಖಲೆ ಬ್ರೇಕ್ ಮಾಡಿದ್ದಾರೆ.
ಇಂಗ್ಲೆಂಡ್ ವಿರುದ್ಧದ 4ನೇ ಟೆಸ್ಟ್ ಪಂದ್ಯದಲ್ಲಿ ಬುಮ್ರಾ ಆಂಗ್ಲರ ಬ್ಯಾಟ್ಸ್ಮನ್ ಒಲಿ ಪೋಪ್ ವಿಕೆಟ್ ಪಡೆದುಕೊಳ್ಳುತ್ತಿದ್ದಂತೆ ಟೆಸ್ಟ್ನಲ್ಲಿ ವೇಗವಾಗಿ 100 ವಿಕೆಟ್ ಪಡೆದುಕೊಂಡಿರುವ ಭಾರತದ ಮೊದಲ ಬೌಲರ್ ಎಂಬ ಸಾಧನೆ ಮಾಡಿದರು. ಕಪಿಲ್ ದೇವ್ 25 ಟೆಸ್ಟ್ ಪಂದ್ಯಗಳಿಂದ 100 ವಿಕೆಟ್ ಪಡೆದುಕೊಂಡಿದ್ದರು.