ಹೊಸದಿಗಂತ ಡಿಜಿಟಲ್ ಡೆಸ್ಕ್:
ಸಂಸತ್ತಿನ ವಿಶೇಷ ಅಧಿವೇಶನ ಕರೆದು ಪಹಲ್ಗಾಮ್ ಉಗ್ರರ ದಾಳಿಯನ್ನು ಖಂಡಿಸಿ ನಿರ್ಣಯ ಕೈಗೊಳ್ಳಬೇಕು. ಆ ಮೂಲಕ ಇಡೀ ದೇಶ ಒಗ್ಗಟ್ಟಾಗಿದೆ ಎಂದು ವಿಶ್ವಕ್ಕೆ ಸಂದೇಶ ರವಾನಿಸಬೇಕು ಎಂದು ರಾಜ್ಯಸಭಾ ಸಂಸದ ಕಪಿಲ್ ಸಿಬಲ್ ಬುಧವಾರ ಪ್ರಧಾನಿ ನರೇಂದ್ರ ಮೋದಿ ಅವರನ್ನು ಒತ್ತಾಯಿಸಿದ್ದಾರೆ.
ಪಾಕಿಸ್ತಾನದ ಮೇಲೆ ರಾಜತಾಂತ್ರಿಕ ಒತ್ತಡ ಹಾಕಲು ವಿವಿಧ ಪ್ರಮುಖ ದೇಶಗಳಿಗೆ ಆಡಳಿತ ಮತ್ತು ವಿರೋಧ ಪಕ್ಷದ ಸಂಸದರ ನಿಯೋಗವನ್ನು ಕಳುಹಿಸುವಂತೆ ಸಿಬಲ್ ಸರ್ಕಾರಕ್ಕೆ ಸೂಚಿಸಿದರು.
ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಮಾಜಿ ಕೇಂದ್ರ ಸಚಿವರು, ಯುಎಸ್ ನಿರ್ಬಂಧ ಮಾಡಿರುವಂತೆ ಪಾಕಿಸ್ತಾನದೊಂದಿಗೆ ವ್ಯವಹಾರ ಇಟ್ಟುಕೊಂಡರೆ ನಮ್ಮ ಮಾರುಕಟ್ಟೆಗೆ ಬರಲು ಸಾಧ್ಯವಿಲ್ಲ ಎಂದು ಪಾಕ್ ಜೊತೆಗೆ ವ್ಯವಹಾರ ಮಾಡುವ ಎಲ್ಲಾ ಪ್ರಮುಖ ರಾಷ್ಟ್ರಗಳಿಗೆ ಭಾರತ ಹೇಳಬೇಕು ಎಂದು ಸಲಹೆ ನೀಡಿದರು.