ಕರಜಗಿ ವಸತಿ ಶಾಲೆ ಪ್ರಕರಣ: ಅಸ್ವಸ್ಥಗೊಂಡಿದ್ದ 55 ವಿದ್ಯಾರ್ಥಿಗಳು ಗುಣಮುಖ; ಪ್ರೀತಿ ದೊಡ್ಡಮನಿ ಮಾಹಿತಿ

ಹೊಸದಿಗಂತ ವರದಿ ಕಲಬುರಗಿ: ಕಲಬುರಗಿ ಜಿಲ್ಲೆಯ ಅಫಜಲಪುರ ತಾಲೂಕಿನ ಕರಜಗಿ ಗ್ರಾಮದ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಉಪಹಾರ ಸೇವಿಸಿದ ಬಳಿಕ ಅಸ್ವಸ್ಥಗೊಂಡಿದ್ದ 55 ವಿದ್ಯಾರ್ಥಿಗಳು ಸಂಪೂರ್ಣ ಗುಣಮುಖರಾಗಿದ್ದು, ಎಲ್ಲರನ್ನು ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿದೆ ಎಂದು ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕಿ ಪ್ರೀತಿ ದೊಡ್ಡಮನಿ ತಿಳಿಸಿದ್ದಾರೆ. ಜುಲೈ 30ರಂದು ಬೆಳಿಗ್ಗೆ ವಿದ್ಯಾರ್ಥಿಗಳು ಉಪಹಾರ ಸೇವಿಸಿದ ನಂತರ ಅಸ್ವಸ್ಥಗೊಂಡ ಹಿನ್ನೆಲೆ ತಕ್ಷಣ ಸಮೀಪದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು. ಘಟನೆ ತಿಳಿಯುತ್ತಿದ್ದಂತೆ ಅಧಿಕಾರಿಗಳು ಆಸ್ಪತ್ರೆಗೆ ಭೇಟಿ … Continue reading ಕರಜಗಿ ವಸತಿ ಶಾಲೆ ಪ್ರಕರಣ: ಅಸ್ವಸ್ಥಗೊಂಡಿದ್ದ 55 ವಿದ್ಯಾರ್ಥಿಗಳು ಗುಣಮುಖ; ಪ್ರೀತಿ ದೊಡ್ಡಮನಿ ಮಾಹಿತಿ