ಜೈಲಿಂದ ರಿಲೀಸ್ ಆದ ಕರವೇ ನಾರಾಯಣಗೌಡ ಮತ್ತೆ ಅರೆಸ್ಟ್!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಕನ್ನಡ ನಾಮಫಲಕ ಕಡ್ಡಾಯಕ್ಕೆ ಆಗ್ರಹಿಸಿ ನಡೆಸಿದ ಹೋರಾಟ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿದ್ದ ಕರ್ನಾಟಕ ರಕ್ಷಣಾ ವೇದಿಕೆಯ ರಾಜ್ಯಾಧ್ಯಕ್ಷ ನಾರಾಯಣಗೌಡ ಮತ್ತೆ ಅರೆಸ್ಟ್ ಆಗಿದ್ದಾರೆ.

ಜಾಮೀನು ಸಿಕ್ಕ ಹಿನ್ನೆಲೆಯಲ್ಲಿ ಇಂದು ಪರಪ್ಪನ ಅಗ್ರಹಾರದಿಂದ ನಾರಾಯಣಗೌಡ ರಿಲೀಸ್ ಆಗಿದ್ದು, ಜೈಲ್ ಗೇಟ್‌ನಲ್ಲೇ ಮತ್ತೆ ಪೊಲೀಸರು ಅವರನ್ನು ಅರೆಸ್ಟ್ ಮಾಡಿದ್ದಾರೆ.

2017 ರಲ್ಲಿ ಸಾರ್ವಜನಿಕ ಆಸ್ತಿನಾಶ, ಅಧಿಕಾರಿಗಳಿಗೆ ಅಡ್ಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೆ ಕರವೇ ಅಧ್ಯಕ್ಷರನ್ನು ಬಂಧಿಸಲಾಗಿದೆ. ಕೋರ್ಟ್ ಮುಂದೆ ಅವರನ್ನು ಹಾಜರುಪಡಿಸಲಾಗುವುದು. ನ್ಯಾಯಾಲಯದ ಆದೇಶದಂತೆ ಮುಂದಿನ ನಿರ್ಧಾರವಾಗಲಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!