ಹೊಸದಿಗಂತ ಡಿಜಿಟಲ್ ಡೆಸ್ಕ್:
ಕರವೇ ಅಧ್ಯಕ್ಷ ನಾರಾಯಣಗೌಡಗೆ ಮತ್ತೆ ಸಂಕಷ್ಟ ಎದುರಾಗಿದ್ದು, ಹಲಸೂರು ಗೇಟ್ ಪೊಲೀಸರು ಮತ್ತೆ ನಾರಾಯಣ ಗೌಡರನ್ನು ವಶಕ್ಕೆ ಪಡೆದಿದ್ದಾರೆ.
ನಾರಾಯಣಗೌಡರನ್ನು ವಶಕ್ಕೆ ಪಡೆದ ಪೊಲೀಸರು ಬೆಂಗಳೂರಿನ 30 ನೇ ಎಸಿಎಂಎಂ ಕೋರ್ಟ್ ಗೆ ಕರೆದೊಯ್ದಿದ್ದಾರೆ.
2017 ರ ಪ್ರಕರಣ ಸಂಬಂಧ ಕರ್ನಾಟಕ ರಕ್ಷಣಾ ವೇದಿಕೆ ಅಧ್ಯಕ್ಷ ನಾರಾಯಣ ಗೌಡರಿಗೆ ಕೋರ್ಟ್ ಜಾಮೀನು ಮಂಜೂರು ಮಾಡಿ ಆದೇಶ ಹೊರಡಿಸಿದೆ. ಈ ಬೆನ್ನಲ್ಲೇ ಮತ್ತೆಸಂಕಷ್ಟ ಎದುರಾಗಿದೆ.
ಕನ್ನಡ ನಾಮಫಲಕ ಕಡ್ಡಾಯಕ್ಕೆ ಒತ್ತಾಯಿಸಿ ಪ್ರತಿಭಟನೆ ತೀವ್ರ ಸ್ವರೂಪಗೊಂಡು, ಹಲವು ಹೋಟೆಲ್, ಅಂಗಡಿಗಳ ನಾಮಫಲಕ ಧ್ವಂಸಗೊಳಿಸಿದ ಪ್ರಕರಣದಲ್ಲಿ ಜೈಲು ಸೇರಿದ್ದ ಕರ್ನಾಟಕ ರಕ್ಷಣಾ ವೇದಿಕೆ ಅಧ್ಯಕ್ಷ ನಾರಾಯಣ ಗೌಡ ಎರಡು ದಿನಗಳ ಹಿಂದಷ್ಟೇ ಪರಪ್ಪನ ಅಗ್ರಹಾರದಿಂದ ಬಿಡುಗಡೆಯಾಗಿದ್ದರು. ನಂತರ 2017 ರ ಆಸ್ತಿಪಾಸ್ತಿ ಹಾನಿ ಪ್ರಕರಣ ಸಂಬಂಧ ಪೊಲೀಸರು ಮತ್ತೆ ಅವರನ್ನು ವಶಕ್ಕೆ ಪಡೆದಿದ್ದರು. ನಂತರ ನಾರಾಯಣ ಗೌಡ ಜಾಮೀನಿಗೆ ಅರ್ಜಿ ಸಲ್ಲಿಸಿದ್ದರು. ನಂತರ ಇಂದು ಅರ್ಜಿ ವಿಚಾರಣೆ ನಡೆಸಿದ ಬೆಂಗಳೂರಿನ 30 ನೇ ಎಸಿಎಂಎಂ ನ್ಯಾಯಾಲಯ ಷರತ್ತುಬದ್ಧ ಜಾಮೀನು ನೀಡಿ ಆದೇಶ ಹೊರಡಿಸಿತ್ತು.