Wednesday, July 6, 2022

Latest Posts

ಮಡಿಕೇರಿಯಲ್ಲಿ ಎಂಇಎಸ್-ಶಿವಸೇನೆ ವಿರುದ್ಧ ಕರವೇ ಪ್ರತಿಭಟನೆ

ಹೊಸದಿಗಂತ ವರದಿ, ಮಡಿಕೇರಿ :

ಮಹಾರಾಷ್ಟ್ರದಲ್ಲಿ ಎಂ.ಇ.ಎಸ್. ಹಾಗೂ ಶಿವಸೇನೆ ಕಾರ್ಯಕರ್ತರಿಂದ ಕನ್ನಡಿಗರ ಮೇಲೆ ನಡೆಯುತ್ತಿರುವ ದೌರ್ಜನ್ಯವನ್ನು ಖಂಡಿಸಿ ಕರ್ನಾಟಕ ರಕ್ಷಣಾ ವೇದಿಕೆ ಮಡಿಕೇರಿಯಲ್ಲಿ ಪ್ರತಿಭಟನೆ ನಡೆಸಿತು.
ನಗರದ ಜನರಲ್ ತಿಮ್ಮಯ್ಯ ವೃತ್ತದಲ್ಲಿ ರಸ್ತೆ ತಡೆ ನಡೆಸಿ ಅಸಮಾಧಾನ ವ್ಯಕ್ತಪಡಿಸಿದ ಪ್ರತಿಭಟನಾಕಾರರು, ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಭವ್ ಠಾಕ್ರೆ ಪ್ರತಿಕೃತಿ ದಹಿಸಿ ಘೋಷಣೆಗಳನ್ನು ಕೂಗಿದರು.
ಈ ಸಂದರ್ಭ ಮಾತನಾಡಿದ ವೇದಿಕೆಯ ಜಿಲ್ಲಾಧ್ಯಕ್ಷ ಪಿ.ಕೆ.ಜಗದೀಶ್, ಭಾಷಾವಾರು ಪ್ರಾಂತ್ಯ ವಿಭಜನೆಯ ನಂತರ ಮಹಾರಾಷ್ಟ್ರದ ಎಂ.ಇ.ಎಸ್ ಹಾಗೂ ಶಿವಸೇನೆ ಸಂಘಟನೆಗಳು ಮಹಾರಾಷ್ಟ್ರ ಮತ್ತು ಬೆಳಗಾವಿಯಲ್ಲಿ ನೆಲೆಸಿರುವ ಕನ್ನಡಿಗರ ಮೇಲೆ ನಿರಂತರ ದಬ್ಬಾಳಿಕೆ ನಡೆಸುತ್ತಿವೆ. ಕೇಂದ್ರ ಮತ್ತು ರಾಜ್ಯದಲ್ಲಿ ಆಡಳಿತ ನಡೆಸಿದ ಎಲ್ಲಾ ಸರಕಾರಗಳು ಇದಕ್ಕೊಂದು ಶಾಶ್ವತ ಪರಿಹಾರ ಸೂಚಿಸುವಲ್ಲಿ ವಿಫಲವಾಗಿವೆ ಎಂದು ಆರೋಪಿಸಿದರು.
ಕನ್ನಡ ಧ್ವಜಕ್ಕೆ ಬೆಂಕಿ ಹಚ್ಚಿ ಅವಮಾನ ಮಾಡಿರುವ ಮತ್ತು ಹೋರಾಟಗಾರರ ಪ್ರತಿಮೆಗೆ ಹಾನಿಯುಂಟು ಮಾಡಿ ಅಶಾಂತಿ ಮೂಡಿಸುತ್ತಿರುವ ಎಂ.ಇ.ಎಸ್ ಸಂಘಟನೆಯನ್ನು ನಿಷೇಧಿಸಬೇಕೆಂದು ಒತ್ತಾಯಿಸಿದರು.
ಕರವೇ ಮಡಿಕೇರಿ ಅಧ್ಯಕ್ಷ ರವಿಗೌಡ, ಸೋಮವಾರಪೇಟೆ ಅಧ್ಯಕ್ಷ ಫ್ರಾನ್ಸಿಸ್ ಡಿಸೋಜ ಸೇರಿದಂತೆ ಜಿಲ್ಲೆಯ ವಿವಿಧ ಭಾಗಗಳ ಮುಖಂಡರು ಹಾಗೂ ಕಾರ್ಯಕರ್ತರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss