Monday, December 8, 2025

ಎಂಇಎಸ್ ಕಾರ್ಯಕರ್ತರ ಪುಂಡಾಟ ಖಂಡಿಸಿ ಮಹಾರಾಷ್ಟ್ರದ ಬಸ್ ಗಳನ್ನು ತಡೆದು ಕರವೇ ಪ್ರತಿಭಟನೆ

ಹೊಸದಿಗಂತ ವರದಿ ಬೆಳಗಾವಿ:

ವಿಧಾನಮಂಡಲ ಚಳಿಗಾಲದ ಅಧಿವೇಶನ ಆರಂಭವಾಗಿರುವ ದಿನದಂದೇ ನಾಡದ್ರೋಹಿ ಎಂಇಎಸ್ ಪುಂಡಾಟ ಮೆರೆದಿದೆ. ಒಂದೆಡೆ ಕೊಲ್ಲಾಪುರದಲ್ಲಿ ಕರ್ನಾಟಕ ಬಸ್ ಗಳನ್ನು ತಡೆದು ಪ್ರತಿಭಟಿಸಿದ್ದರೆ ಮತ್ತೊಂದೆಡೆ ಮಹಾಮೇಳಾವ್ ನಡೆಸಲು ಬೆಳಗಾವಿಗೆ ಆಗಮಿಸಲು ಯತ್ನಿಸಿದ್ದ ಮುಖಂಡರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಎಂಇಎಸ್ ಕಾರ್ಯಕರ್ತರ ಪುಂಡಾಟ ಖಂಡಿಸಿ ಕರವೇ ಕಾರ್ಯಕರ್ತರು ಬೆಳಗಾವಿಯಲ್ಲಿ ಪ್ರತಿಭಟನೆ ನಡೆಸಿದರು. ಕೊಲ್ಲಾಪುರದಲ್ಲಿ ಕರ್ನಾಟಕ ಬಸ್ ಗಳನ್ನು ಎಂಇಎಸ್ ಕಾರ್ಯಕರ್ತರು ತಡೆದಿದ್ದನ್ನು ಖಂಡಿಸಿ ಕರವೇ ಕಾರ್ಯಕರ್ತರು ಅಥಣಿಯಲ್ಲಿ ಮಹಾರಾಷ್ಟ್ರ ಬಸ್ ಗಳನ್ನು ತಡೆದು ಆಕ್ರೋಶ ವ್ಯಕ್ತಪಡಿಸಿದರು.‌ ಬೆಳಗಾವಿ ಜಿಲ್ಲೆಯ ಅಥಣಿ ಪಟ್ಟಣದಲ್ಲಿ ಕರವೇ ಶಿವರಾಮೇಗೌಡ ಬಣದ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ. ಇದರಿಂದಾಗಿ ಕರ್ನಾಟಕ- ಮಹಾರಾಷ್ಟ್ರ ಗಡಿಗಳಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ.

error: Content is protected !!