ಹೊಸದಿಗಂತ ಡಿಜಿಟಲ್ ಡೆಸ್ಕ್:
ನಾಳೆ ರಾಜ್ಯಾದ್ಯಂತ ಕರ್ನಾಟಕ ರಕ್ಷಣಾ ವೇದಿಕೆ ಪ್ರತಿಭಟನೆಗೆ ನೀಡಿದೆ.
ಕನ್ನಡಿಗರ ಉದ್ಯೋಗಕ್ಕೆ ಆಗ್ರಹಿಸಿ ನಾಳೆ ಬೆಳಗ್ಗೆ 11 ಗಂಟೆಯಿಂದ ಸಂಜೆ 4ರವರೆಗೆ ಬೃಹತ್ ಪ್ರತಿಭಟನೆ ಮಾಡಲಾಗುತ್ತಿದೆ. ಕನ್ನಡಿಗರಿಗೆ ಖಾಸಗಿ ವಲಯದಲ್ಲಿ ಕಡ್ಡಾಯ ಉದ್ಯೋಗ ಮೀಸಲಾತಿ ಕಲ್ಪಿಸಲು ಆಗ್ರಹಿಸಿ, ಸರೋಜಿನಿ ಮಹಿಷಿ ವರದಿ ಜಾರಿಗೆ ತರುವಂತೆ ಆಗ್ರಹಿಸಿ ಕರವೇ ಅಧ್ಯಕ್ಷ ಟಿ.ಎ.ನಾರಾಯಣಗೌಡ ನೇತೃತ್ವದಲ್ಲಿ ಬೆಂಗಳೂರು ಸೇರಿ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಬೃಹತ್ ಹೋರಾಟಕ್ಕೆ ಕರೆ ನೀಡಲಾಗಿದೆ.
ಇತರೆ ರಾಜ್ಯಗಳಿಂದ ಉದ್ಯೋಗ ಅರಸಿ ಬೆಂಗಳೂರಿನತ್ತ ವಲಸೆ ಬರುವವರ ಸಂಖ್ಯೆ ಹೆಚ್ಚಳವಾಗಿದೆ. ಖಾಸಗಿ ವಲಯಗಳಲ್ಲಿ ಕನ್ನಡೇತರರಿಗೆ ಹೆಚ್ಚಿನ ಉದ್ಯೋಗ ಅವಕಾಶ ನೀಡಲಾಗುತ್ತಿದೆ. ಇದರಿಂದ ಕನ್ನಡಿಗರಿಗೆ ಅನ್ಯಾಯವಾಗುತ್ತಿದೆ. ಖಾಸಗಿ ವಲಯದಲ್ಲಿ ಸಿ ಮತ್ತು ಡಿ ದರ್ಜೆಯ ಹುದೆಗಳಲ್ಲಿ ಶೇಕಡಾ 100 ರಷ್ಟು ಕನ್ನಡಿಗರಿಗೆ ಮೀಸಲಾತಿ ನೀಡಬೇಕು. ಇತರೆ ಗ್ರೂಪ್ಗಳಲ್ಲಿ ಶೇಕಡಾ 80 ರಷ್ಟು ಮೀಸಲಾತಿ ನೀಡುವಂತೆ ಆಗ್ರಹಿಸಲಾಗಿದೆ.
ಜೊತೆಗೆ ಕೈಗಾರಿಕಾ ಉದ್ಯೋಗ ಸ್ಥಾಯಿ ಆದೇಶ ಕಾಯ್ದೆ 1946 ರ ಅನ್ವಯ ಬಲಿಷ್ಠ ಕಾನೂನೂ ರೂಪಿಸಿ ಕನ್ನಡಿಗರಿಗೆ ಉದ್ಯೋಗ ಮೀಸಲಾತಿ ನೀಡಬೇಕು. ಹಾಗೆಯೇ ಖಾಸಗಿ ಸಂಸ್ಥೆಗಳ ಸಿ ಮತ್ತು ಡಿ ದರ್ಜೆ ಹುದ್ದೆ 100% ಕನ್ನಡಿಗರಿಗೆ ಮೀಸಲಿಡಬೇಕು. ಖಾಸಗಿ ಸಂಸ್ಥೆಗಳ ಇತರೆ ಹುದ್ದೆಯಲ್ಲಿ 80%ಕನ್ನಡಿಗರಿಗೆ ಮೀಸಲಿಡಬೇಕು.
ಹದಿನೈದು ವರ್ಷ ರಾಜ್ಯದಲ್ಲಿದ್ದವರಿಗೆ ಕನ್ನಡಿಗರೆಂದು ಪರಿಗಣಿಸುವ ನಿಯಮವಿದ್ದು, ಅಂತವರಿಗೆ ಕನ್ನಡ ಪರೀಕ್ಷೆ ನಡೆಸಿ ಉತ್ತೀರ್ಣರಾದರೆ ಮಾತ್ರ ಕನ್ನಡಿಗರೆಂದು ಪರಿಗಣಿಸಬೇಕು.
ನಿಯಮ ಪಾಲಿಸದ ಸಂಸ್ಥೆಗಳ ಲೈಸೆನ್ಸ್ ರದ್ದು ಮಾಡಬೇಕು. ಸರ್ಕಾರ ನೀಡಿರುವ ಭೂಮಿ, ಸವಲತ್ತುಗಳನ್ನ ವಾಪಾಸ್ ಪಡೆದು ಕ್ರಿಮಿನಲ್ ಮೊಕದ್ದಮೆ ಹಾಕಬೇಕು ಎಂದು ಆಗ್ರಹಿಸಿದ್ದಾರೆ.