ಹೊಸದಿಗಂತ ವರದಿ ಬಳ್ಳಾರಿ:
ಕಾರ್ಗಿಲ್ ವಿಜಯ ದಿವಸ್ ಕಾರ್ಯಕ್ರಮವನ್ನು ಬಳ್ಳಾರಿಯಲ್ಲಿ ಮಾಜಿ ಶಾಸಕ ಗಾಲಿ ಸೋಮಶೇಖರ್ ರೆಡ್ಡಿ ಅವರ ನೇತೃತ್ವದಲ್ಲಿ ಅರ್ಥಪೂರ್ಣವಾಗಿ ಆಚರಿಸಲಾಯಿತು.
ನಗರದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಚೇರಿ ಬಳಿ ಜಮಾಯಿಸಿದ ಬಿಜೆಪಿ ನೂರಾರು ಕಾರ್ಯಕರ್ತರು ವೀರ ಯೋಧರರ ದೇಶಪ್ರೇಮವನ್ನು ಸ್ಮರಿಸಿ, ಗೌರವ ಸಲ್ಲಿಸಿದರು. ನಂತರ ಮಾಜಿ ಶಾಸಕ ಗಾಲಿ ಸೋಮಶೇಖರ್ ರೆಡ್ಡಿ ಅವರು ಮಾತನಾಡಿ, ಕಳೆದ 1996ರ ಜುಲೈ 26 ರಂದು ಭಾರತ ಹಾಗೂ ಪಾಕಿಸ್ತಾನ್ ಮಧ್ಯೆ ಯುದ್ದ ನಡೆದಿತ್ತು, ಈ ಯುದ್ದದಲ್ಲಿ ನಮ್ಮ ಭಾರತ ವಿಜಯಶಾಲಿಯಾಗಿ ಹೊರ ಹೊಮ್ಮಿತ್ತು. ಈ ಯುದ್ಧದಲ್ಲಿ ಅನೇಕ ವೀರಯೋಧರು ಪ್ರಾಣವನ್ನು ಲೆಕ್ಕಿಸದೇ ದೇಶಕ್ಕಾಗಿ ಹೊರಾಟ ನಡೆಸಿದ್ದರು. ಈ ಯುದ್ದದಲ್ಲಿ ಸುಮಾರು ಜನ ನಮ್ಮ ವೀರ ಯೋಧರು ಪ್ರಾಣ ತ್ಯಾಗ ಮಾಡಿದ್ದಾರೆ. ಅವರನ್ನು ಸ್ಮರಿಸಿ, ಗೌರವಿಸುವ ದಿನ ಇದಾಗಿದೆ ಎಂದರು.
ಭಾರತದಲ್ಲಿ ಪ್ರತಿವರ್ಷ ಜು.26 ರಂದು ಕಾರ್ಗಿಲ್ ವಿಜಯೋತ್ಸವವನ್ನು ಆಚರಿಸಲಾಗುತ್ತಿದೆ. ಇದರ ಅಂಗವಾಗಿ ಬಳ್ಳಾರಿ ನಗರದಲ್ಲೂ ಕಾರ್ಗಿಲ್ ವಿಜಯ್ ದಿವಸ್ ಕಾರ್ಯಕ್ರಮವನ್ನು ಅರ್ಥಪೂರ್ಣವಾಗಿ ಆಚರಿಸಲಾಗಿದೆ ಎಂದು ಅವರು ತಿಳಿಸಿದರು.
ಈ ಸಂದರ್ಭದಲ್ಲಿ ಮಹಾನಗರ ಪಾಲಿಕೆ ಸದಸ್ಯ ಶ್ರೀನಿವಾಸ್ ಮೊತ್ಕರ್, ಬಿಜೆಪಿ ಪ್ರಮುಖರು, ನಿವೃತ್ತ ವೀರಯೋಧರು, ವಿವಿಧ ಅಧಿಕಾರಿಗಳು, ಸೇರಿದಂತೆ ವಿವಿಧ ಗಣ್ಯರು ಉಪಸ್ಥಿತರಿದ್ದರು.