Sunday, August 14, 2022

Latest Posts

ದೇಶಕ್ಕೆ ಹರ್ಷ ತಂದ ಕಾರ್ಗಿಲ್ ವಿಜಯ ಪತಾಕೆಗೆ ಇಂದು ತುಂಬಿತು 23 ವರ್ಷ!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಕಾರ್ಗಿಲ್ ಯುದ್ಧದಲ್ಲಿ ಭಾರತ ವಿಜಯ ಪತಾಕೆಯನ್ನು ಹಾರಿಸಿ ಇಂದಿಗೆ (ಜು.26) 23 ವರ್ಷ ಪೂರ್ಣಗೊಂಡಿದೆ.
1999ನೇ ಇಸವಿಯ ಜುಲೈ 26ರಂದು ಭಾರತೀಯ ಸೈನಿಕರು ಆಪರೇಶನ್ ವಿಜಯ್ ಮೂಲಕ ಕಾರ್ಗಿಲ್ ಡ್ರಾಸ್ ವಲಯದಲ್ಲಿ ಪ್ರದರ್ಶಿಸಿದ ಶೌರ್ಯದ ನೆನಪಿಗಾಗಿ ಈ ದಿನವನ್ನು ಕಾರ್ಗಿಲ್ ವಿಜಯ ದಿವಸ್ ಎಂದು ಆಚರಿಸಲಾಗುತ್ತದೆ.

1999ರ ಮೇ ತಿಂಗಳಿನಲ್ಲಿ ಆರಂಭವಾಗಿ ಜುಲೈ ಅಂತ್ಯದ ತನಕ ಅಂದರೆ ಸುಮಾರು ಎರಡು ತಿಂಗಳ ಕಾಲ ನಡೆದ ಕಾರ್ಗಿಲ್ ಯುದ್ಧದಲ್ಲಿ ಲೇಹ್ ಹೆದ್ದಾರಿಯವರೆಗೆ ನುಗ್ಗಿ ಬಂದಿದ್ದ ಪಾಕ್ ಸೇನೆಯನ್ನು ಭಾರತೀಯ ಸೇನೆ ಕೆಚ್ಚೆದೆಯಿಂದ ಯಶಸ್ವಿಯಾಗಿ ಹಿಮ್ಮೆಟ್ಟಿಸಿತ್ತು. ಈ ಯುದ್ಧದಲ್ಲಿ ಭಾರತೀಯ ಸೇನೆಯ ಅಧಿಕಾರಿಗಳು ಸೇರಿದಂತೆ ಸುಮಾರು 527 ಭಾರತೀಯ ಯೋಧರು ಹುತಾತ್ಮರಾದರು

ಕಾರ್ಗಿಲ್ ಯುದ್ಧ ಭಾರತೀಯ ಸೈನಿಕರ ಹೋರಾಟದ ಛಲ, ಶಕ್ತಿಗೆ ಸಾಕ್ಷಿಯಾದ ಯುದ್ಧವದು. ಅಲ್ಲದೆ ಪಾಕಿಸ್ತಾನ ಶಾಂತಿಯ ಮಾತಿನ ಬೆನ್ನಲ್ಲೆ ಭಾರತಕ್ಕೆ ಇರಿದ ಚೂರಿಯ ಗಾಯದ ಗುರುತೇ ಈ ಕಾರ್ಗಿಲ್. 1999ರ ಜುಲೈ 26ರಂದು ಭಾರತೀಯ ಸೈನಿಕರು ಅಪರೇಷನ್ ವಿಜಯ್ ಮೂಲಕ ಕಾರ್ಗಿಲ್-ಡ್ರಾಸ್ ವಲಯದಲ್ಲಿ ಪ್ರದರ್ಶಿಸಿದ ಶೌರ್ಯದ ನೆನಪಿಗಾಗಿ ಈ ದಿನವನ್ನು ಕಾರ್ಗಿಲ್ ವಿಜಯ ದಿವಸ್ ಎಂದು ಆಚರಿಸಲಾಗುತ್ತದೆ. ಈ ಸಂದರ್ಭದಲ್ಲಿ ಯೋಧರಿಗೆ ನಮ್ಮದೂ ಇರಲಿ ನಮನ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss