ಹೊಸದಿಗಂತ ಡಿಜಿಟಲ್ ಡೆಸ್ಕ್:
ಕಾರ್ಗಿಲ್ ವಿಜಯ್ ದಿವಸ್ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಶುಭಾಶಯ ಕೋರಿದ್ದಾರೆ ಮತ್ತು ಕಾರ್ಗಿಲ್ ಯುದ್ಧದಲ್ಲಿ ಧೈರ್ಯ ಮತ್ತು ಶೌರ್ಯದಿಂದ ಹೋರಾಡಿದ ಯೋಧರ ತ್ಯಾಗವನ್ನು ಸ್ಮರಿಸಿದ್ದಾರೆ.
ಜವಾನರು ಮಾಡಿದ ತ್ಯಾಗಗಳು ಪ್ರತಿ ಪೀಳಿಗೆಗೂ ಸ್ಫೂರ್ತಿ ನೀಡುತ್ತಲೇ ಇರುತ್ತವೆ ಎಂದು ಪ್ರಧಾನಿ ಮೋದಿ ಹೇಳಿದರು.
“ಕಾರ್ಗಿಲ್ ವಿಜಯ್ ದಿವಸ್ನಂದು ದೇಶವಾಸಿಗಳಿಗೆ ಹೃತ್ಪೂರ್ವಕ ಶುಭಾಶಯಗಳು. ರಾಷ್ಟ್ರದ ಹೆಮ್ಮೆಯನ್ನು ರಕ್ಷಿಸಲು ತಮ್ಮ ಪ್ರಾಣವನ್ನೇ ಮುಡಿಪಾಗಿಟ್ಟ ಭಾರತ ಮಾತೆಯ ಧೈರ್ಯಶಾಲಿ ಪುತ್ರರ ಅಪ್ರತಿಮ ಧೈರ್ಯ ಮತ್ತು ಶೌರ್ಯವನ್ನು ಈ ಸಂದರ್ಭ ನಮಗೆ ನೆನಪಿಸುತ್ತದೆ. ಮಾತೃಭೂಮಿಗಾಗಿ ಎಲ್ಲವನ್ನೂ ತ್ಯಾಗ ಮಾಡುವ ಅವರ ಉತ್ಸಾಹವು ಪ್ರತಿ ಪೀಳಿಗೆಗೂ ಸ್ಫೂರ್ತಿ ನೀಡುತ್ತದೆ” ಎಂದು ಪ್ರಧಾನಿ ಮೋದಿ X ನಲ್ಲಿ ಪೋಸ್ಟ್ ಮಾಡಿದ್ದಾರೆ.