Thursday, March 30, 2023

Latest Posts

ಕಾರ್ಕಳ ಉತ್ಸವಕ್ಕೆ ರಾಜ್ಯಪಾಲರನ್ನು ಆಹ್ವಾನಿಸಿದ ಸಚಿವ ಸುನೀಲ್

ಹೊಸದಿಗಂತ ಡಿಜಿಟಲ್ ಡೆಸ್ಕ್

ಬೆಂಗಳೂರು: ಇಂಧನ ಹಾಗೂ ಕನ್ನಡ ಸಂಸ್ಕೃತಿ ಸಚಿವ ವಿ.ಸುನೀಲ್ ಕುಮಾರ್ ಇಂದು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರನ್ನು ಭೇಟಿ ಮಾಡಿ ಸೌಹಾರ್ದಯುತ ಚರ್ಚೆ ನಡೆಸಿದ್ದಾರೆ. ಮಾ. 10ರಿಂದ 20ರವರೆಗೆ ನಡೆಯಲಿರುವ ಕಾರ್ಕಳ ಉತ್ಸವಕ್ಕೆ ರಾಜ್ಯಪಾಲರನ್ನು ಆಹ್ವಾನಿಸಿ, ಉತ್ಸವದ ವೈಶಿಷ್ಟ್ಯಗಳನ್ನು ವಿವರಿಸಿದ್ದಾರೆ.

ಕನ್ನಡ ಮತ್ತು ಸಂಸ್ಕ್ರತಿ ಇಲಾಖೆ ಸಹಯೋಗದೊಂದಿಗೆ ಈ ಕಾರ್ಕಳ ಉತ್ಸವ ಆಯೋಜಿಸಲಾಗಿದೆ. ತುಳು ನಾಡಿನ ಸಾಂಸ್ಕ್ರತಿಕ ಬದುಕಿನ ಅನಾವರಣದ ಜೊತೆಗೆ ಕೋವಿಡ್ ನಿಂದ ಏಕತಾನತೆಗೆ ಸಿಲುಕಿದ್ದ ತಾಲೂಕಿನ ಜನಜೀವನಕ್ಕೆ ಉತ್ಸಾಹ ಹಂಚುವ ಉದ್ದೇಶವನ್ನು ಉತ್ಸವ ಹೊಂದಿದೆ.

ಉತ್ಸವ ಕಾರ್ಕಳದಲ್ಲಿ ನಡೆಯುತ್ತಿದ್ದರೂ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಈಗಾಗಲೇ ಸದ್ದು ಮಾಡುತ್ತಿದೆ. ತುಳುನಾಡಿನ ಸಾಂಸ್ಕ್ರತಿಕ ವೈಭವ ಉತ್ಸವದ ಜೀವಾಳವಾಗಿದೆ.
ಈ ಹಿನ್ನೆಲೆಯಲ್ಲಿ ಸಿದ್ಧತಾ ಕಾರ್ಯ ಭರದಿಂದ ನಡೆಯುತ್ತಿದ್ದು, ಗಣ್ಯಾತಿಗಣ್ಯರು, ಅನಿವಾಸಿ ಕಾರ್ಕಳ ಜನರು ಸೇರಿದಂತೆ ಲಕ್ಷಾಂತರ ಜನರು ಭಾಗವಹಿಸಲಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!