ಪವರ್‌ಲಿಫ್ಟಿಂಗ್‌ ಚಾಂಪಿಯನ್‌ಶಿಪ್‌ನಲ್ಲಿ ಚಿನ್ನ ಗೆದ್ದ ಕಾರ್ಕಳದ ಅಕ್ಷತಾ ಪೂಜಾರಿ ಬೋಳ

ಹೊಸದಿಗಂತ ವರದಿ, ಮಂಗಳೂರು:

ದಕ್ಷಿಣ ಆಫ್ರಿಕಾದ ಪೊಟ್‌ಶೆಫಮ್‌ನಲ್ಲಿ ನಡೆದ ಏಷ್ಯಾ- ಪೆಸಿಫಿಕ್-ಆಫ್ರಿಕನ್ ಪವರ್‌ಲಿಫ್ಟಿಂಗ್ ಮತ್ತು ಬೆಂಚ್‌ಪ್ರೆಸ್ ಚಾಂಪಿಯನ್‌ಶಿಪ್‌ನಲ್ಲಿ ಭಾರತವನ್ನು ಪ್ರತಿನಿಧಿಸಿದ ಅಕ್ಷತಾ ಪೂಜಾರಿ ಬೋಳ ಚಿನ್ನದ ಪದಕ ಗೆದ್ದಿದ್ದಾರೆ.

ಸೀನಿಯರ್ಸ್ ವಿಭಾಗದಲ್ಲಿ ಸ್ಪರ್ಧಿಸಿದ್ದ ಅಕ್ಷತಾ ಪೂಜಾರಿ ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಬೋಳ ಗ್ರಾಮದವರು. ಸೀನಿಯರ್ಸ್ ವಿಭಾಗದ 52 ಕೆಜಿ ವಿಭಾಗದಲ್ಲಿ ಅಕ್ಷತಾ ಪೂಜಾರಿ ಬೋಳ ಈ ಸಾಧನೆ ಮಾಡಿದ್ದಾರೆ.

ಪವರ್‌ಲಿಫ್ಟಿಂಗ್ ಕ್ಷೇತ್ರದಲ್ಲಿ ಸಾಧನೆ ಮಾಡಿರುವ ಅಕ್ಷತಾ ಪೂಜಾರಿ ಬೋಳ ಅವರು ಹಲವಾರು ಚಿನ್ನದ ಪದಕ ಗೆದ್ದುಕೊಂಡಿದ್ದಾರೆ. ಏಷ್ಯಾಮಟ್ಟ ಕಾಮನ್‌ವೆಲ್ತ್ ಕೂಟ ಮತ್ತು ವಿಶ್ವಮಟ್ಟದಲ್ಲಿ ಹಲವಾರು ಚಿನ್ನದ ಪದಕ ಜಯಿಸಿರುವ ಅಕ್ಷತಾ ಏಕಲವ್ಯ ಪ್ರಶಸ್ತಿಗೆ ಭಾಜನರಾಗಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!