ಕರ್ಮಣ್ಯೇವಾಧಿಕಾರಸ್ತೇ ಮಾ ಫಲೇಶು ಕದಾಚನ: ಬೈ ಎಲೆಕ್ಷನ್ ಕುರಿತು ಡಿ.ಕೆ. ಶಿವಕುಮಾರ್ ರಿಯಾಕ್ಷನ್

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ಕರ್ಮಣ್ಯೇವಾಧಿಕಾರಸ್ತೇ ಮಾ ಫಲೇಶು ಕದಾಚನ. ಮೂರು ಕ್ಷೇತ್ರಗಳ ಉಪಚುನಾವಣೆಯಲ್ಲಿ ನಾವು ನಮ್ಮ ಪ್ರಯತ್ನವನ್ನು ಮಾಡಿದ್ದೇವೆ. ಆದರೆ, ಫಲಾಫಲ ಭಗವಂತನದ್ದು ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಹೇಳಿದರು.

ರಾಜ್ಯದ ಉಪಚುನಾವಣೆ ಫಲಿತಾಂಶ ಏನಾಗಲಿದೆ ಎಂದು ಕೇಳಿದಾಗ, ಎಲ್ಲಾ ಕಡೆಯೂ ದೇವರು ನಮಗೆ ಒಳ್ಳೆಯದು ಮಾಡುತ್ತಾನೆ ಎನ್ನುವ ಭರವಸೆಯನ್ನು ಇಟ್ಟಿದ್ದೇವೆ ಎಂದು ಹೇಳಿದರು.

ರಾಜ್ಯದಲ್ಲಿ ಮೂರು ಪಕ್ಷಗಳು ತಲಾ ಒಂದೊಂದು ಸ್ಥಾನ ಗೆಲ್ಲುತ್ತವೆ ಎನ್ನುವ ಸಮೀಕ್ಷೆಗಳ ಬಗ್ಗೆ ಪ್ರತಿಕ್ರಿಯಿಸಿದ ಅವರು, ಕರ್ನಾಟಕ ವಿಧಾನಸಭೆ ಹಾಗೂ ಹರಿಯಾಣದ ಚುನಾವಣೆ ಬಗ್ಗೆ ಸಮೀಕ್ಷೆಗಳು ಏನು ಹೇಳಿದ್ದವು? ನನಗೆ ಯಾವುದೇ ಸಮೀಕ್ಷೆಗಳ ಮೇಲೆ ನಂಬಿಕೆಯಿಲ್ಲ. ಸಮೀಕ್ಷೆಗಳನ್ನು ಕಟ್ಟಿಕೊಂಡು ರಾಜಕೀಯ ಮಾಡಲು ಆಗುವುದಿಲ್ಲ. ಯಾರು ಜನರ ಹೃದಯ ಹಾಗೂ ವಿಶ್ವಾಸ ಪಡೆದಿರುತ್ತಾರೋ ಅವರಿಗೆ ಜನ ಗೌಪ್ಯ ಮತದಾನದ ಮೂಲಕ ಬೆಂಬಲ ನೀಡುತ್ತಾರೆ ಎಂದರು.

 

- Advertisement - Prestige

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!