ಹೊಸದಿಗಂತ ಡಿಜಿಟಲ್ ಡೆಸ್ಕ್:
ವಾಹನ ಸವಾರರಿಗೆ ಮತ್ತೆ ಗುಡ್ ನ್ಯೂಸ್ ಸಿಕ್ಕಿದ್ದು, ಸಂಚಾರ ನಿಯಮ ಉಲ್ಲಂಘನೆಗೆ ದಂಡ ಕಟ್ಟಲು ಮತ್ತೆ ಶೇ.50ರಷ್ಟು ರಿಯಾಯಿತಿ ನೀಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಪೊಲೀಸ್ ಇಲಾಖೆಯ ಸಂಚಾರಿ ಇ-ಚಲನ್ ನಲ್ಲಿ ದಾಖಲಾಗಿರುವ ಬಾಕಿ ಪ್ರಕರಣಗಳ ದಂಡದ ಮೊತ್ತದಲ್ಲಿ ಶೇಕಡಾ 50ರ ರಿಯಾಯಿತಿ ನೀಡಿ ಈ ಹಿಂದೆ ಆದೇಶಿಸಲಾಗಿತ್ತು. ಇದೀಗ ಪೊಲೀಸ್ ಇಲಾಖೆಯಲ್ಲಿ ಸಂಚಾರಿ ಇ-ಚಲನ್ನಲ್ಲಿ 2023ರ ಫೆಬ್ರವರಿ 11ರೊಳಗೆ ದಾಖಲಾದ ಪ್ರಕರಣಗಳಿಗೆ ಮಾತ್ರ ಅನ್ವಯವಾಗುವಂತೆ, ಮತ್ತೊಮ್ಮೆ ಶೇ 50ರಷ್ಟು ರಿಯಾಯಿತಿ ನೀಡಲಾಗಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.
ಸೆಪ್ಟೆಂಬರ್ 9ರ ವರೆಗೆ ರಿಯಾಯಿತಿ ದರದಲ್ಲಿ ಡಂಡ ಪಾವತಿಸಲು ಅವಕಾಶವಿದೆ ಎಂದು ಸಾರಿಗೆ ಇಲಾಖೆ ತಿಳಿಸಿದೆ. ಈ ಹಿಂದೆಯೂ ಎರಡು ಬಾರಿ ರಿಯಾಯಿತಿ ದರದಲ್ಲಿ ದಂಡ ಪಾವತಿಗೆ ಸರ್ಕಾರ ಅವಕಾಶ ನೀಡಿತ್ತು. ನಂತರ ರಾಜ್ಯ ವಿಧಾನಸಭೆ ಚುನಾವಣೆ ಘೋಷಣೆಯಾಗಿದ್ದು, ರಿಯಾಯಿತಿ ದರದಲ್ಲಿ ದಂಡ ಪಾವತಿ ಮಾಡುವ ಅವಕಾಶ ಸ್ಥಗಿತಗೊಳಿಸಲಾಗಿತ್ತು. ಇದೀಗ ಮತ್ತೊಮ್ಮೆ ಅವಕಾಶ ದೊರೆತ್ತಿದ್ದು, ವಾಹನ ಸವಾರರು ಕೂಡಲೇ ದಂಡ ಪಾವತಿಸಬಹುದು.