ದ್ವಿತೀಯ ಪಿಯು ಫಲಿತಾಂಶ ಪ್ರಕಟ: ಈ ಬಾರಿಯೂ ಬಾಲಕಿಯರೇ ಮೇಲುಗೈ

ಹೊಸದಿಗಂತ ಡಿಜಿಟಲ್‌ ಡೆಸ್ಕ್ :‌

ಕರ್ನಾಟಕ ದ್ವಿತೀಯ ಪಿಯು ಫಲಿತಾಂಶ ಇಂದು ಪ್ರಕಟವಾಗಿದ್ದು, ಎಂದಿನಂತೆ ಪ್ರಸಕ್ತ ವರ್ಷವೂ ವಿದ್ಯಾರ್ಥಿನಿಯರೇ ಮೈಲುಗೈ ಸಾಧಿಸಿದ್ದಾರೆ.

ಪ್ರಸಕ್ತ ಸಾಲಿನಲ್ಲಿ 7,02,067 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು ಅವರಲ್ಲಿ 5,24,209 ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ.

ಫಲಿತಾಂಶದಲ್ಲಿ ಬಾಲಕಿಯರೇ ಮೇಲುಗೈ ಸಾಧಿಸಿದ್ದಾರೆ‌. ಶೇ 80.72 ವಿದ್ಯಾರ್ಥಿನಿಯರು ಹಾಗೂ ಶೇ 69.05ರಷ್ಟು ಬಾಲಕರು ಉತ್ತೀರ್ಣರಾಗಿದ್ದಾರೆ.

ಪರೀಕ್ಷೆಗೆ ಹಾಜರಾದ ವಿದ್ಯಾರ್ಥಿಗಳ ವಿವರ :

ಪರೀಕ್ಷೆಗೆ ನೋಂದಾಯಿಸಿಕೊಂಡ ವಿದ್ಯಾರ್ಥಿಗಳ ಸಂಖ್ಯೆ- 727,923

ಪರೀಕ್ಷೆಗೆ ಅರ್ಹರಾದ ವಿದ್ಯಾರ್ಥಿಗಳ ಸಂಖ್ಯೆ – 725,821

ಎಲ್ಲಾ ವಿಷಯಗಳಲ್ಲಿ ಪರೀಕ್ಷೆಗೆ ಗೈರುಹಾಜರಾದ ವಿದ್ಯಾರ್ಥಿಗಳ ಸಂಖ್ಯೆ – 23,754

ಪರೀಕ್ಷೆಗೆ ಹಾಜರಾದ ವಿದ್ಯಾರ್ಥಿಗಳ ಸಂಖ್ಯೆ – 702,067

ಪರೀಕ್ಷೆಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳ ಸಂಖ್ಯೆ: 524,209

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!