ಕರ್ನಾಟಕ ರಾಜ್ಯದಲ್ಲಿ 60 ಸಾವಿರ ಮೆಗಾವ್ಯಾಟ್ ವಿದ್ಯುತ್ ಉತ್ಪಾದನೆ ಗುರಿ: ಮುಖ್ಯಮಂತ್ರಿ ಸಿದ್ದರಾಮಯ್ಯ

ಹೊಸದಿಗಂತ ಡಿಜಿಟಲ್ ಡೆಸ್ಕ್:

ವಿದ್ಯುತ್ ಉತ್ಪಾದನೆಯಲ್ಲಿ ದೇಶಕ್ಕೆ ರಾಜ್ಯದ ಕೊಡುಗೆ ಅಪಾರ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದ್ದಾರೆ.

ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆದ ಕರ್ನಾಟಕ ವಿದ್ಯುತ್ ಪ್ರಸರಣ ನೌಕರರ ನಿಗಮ ವಜ್ರಮಹೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಮುಂದಿನ ದಿನಗಳಲ್ಲಿ ರಾಜ್ಯದಲ್ಲಿ 60 ಸಾವಿರ ಮೆಗಾವ್ಯಾಟ್ ವಿದ್ಯುತ್ ಉತ್ಪಾದನೆ ಗುರಿ ಹೊಂದಲಾಗಿದೆ ಎಂದು ಹೇಳಿದ್ದಾರೆ.

ಇದೇ ವೇಳೆ ರಾಜ್ಯದಲ್ಲಿ ವಿದ್ಯುತ್ ಪಂಪ್ ಸೆಟ್ ಗಳಿಗೆ 19 ಸಾವಿರ ಕೋಟಿ ರೂಪಾಯಿ ಸಬ್ಸಿಡಿ ನೀಡಲಾಗುತ್ತಿದೆ ಎಂದು ಸ್ಪಷ್ಟ ಪಡಿಸಿದ್ದಾರೆ. 1902ರಲ್ಲಿ ಮೊದಲನೇ ಬಾರಿಗೆ ಕರ್ನಾಟಕದಲ್ಲಿ ವಿದ್ಯುತ್ ಉತ್ಪಾದನೆಯಾಯಿತು. 1905 ರಲ್ಲಿ ಬೆಂಗಳೂರಿನಲ್ಲಿ ಮೊದಲ ಬಾರಿಗೆ ವಿದ್ಯುತ್ ಸರಬರಾಜು ಆಗಿದೆ ಎಂದು ಅವರು ತಿಳಿಸಿದ್ದಾರೆ. ಕಾರ್ಯಕ್ರಮದಲ್ಲಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಇಂಧನ ಸಚಿವ ಕೆ.ಜೆ. ಜಾರ್ಜ್ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!