ಕರ್ನಾಟಕ ಮತ್ತು ಮಹಾರಾಷ್ಟ್ರ ಗಡಿ ವಿವಾದ: ರಾಜ್ಯದ ಪರ ವಾದ ಮಂಡನೆಗೆ ಹಿರಿಯ ವಕೀಲರ ನೇಮಕ

ಹೊಸ ದಿಗಂತ ವರದಿ, ಹುಬ್ಬಳ್ಳಿ:

ಕರ್ನಾಟಕ ಮತ್ತು ಮಹಾರಾಷ್ಟ್ರ ಗಡಿ ವಿವಾದ ಸುಪ್ರೀಂ ಕೋಟ್೯ ವಿಚಾರಣೆಗೆ ಸಂಬಂಧಿಸಿದಂತೆ ರಾಜ್ಯದ ಪರ ವಾದ ಮಂಡನೆಗೆ ಹಿರಿಯ ವಕೀಲರನ್ನು ನೇಮಿಸಲಾಗುತ್ತದೆ ಎಂದು ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ನಗರದಲ್ಲಿ ವಿಮಾನ ನಿಲ್ದಾಣದಲ್ಲಿ ಭಾನುವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನವೆಂಬರ್ 23 ರಂದು ಸುಪ್ರೀಂ ಕೋರ್ಟ್ ನಲ್ಲಿ ವಿಚಾರಣೆ ನಡೆಯಲಿದೆ. ಅಡ್ವಕೇಟ್ ಜನರಲ್ ಸಂಪರ್ಕದಲ್ಲಿದ್ದು, ಅವರು ಸಂಪೂರ್ಣ ಅಧ್ಯಯನವನ್ನು ಮಾಡಿದ್ದಾರೆ. ಗಡಿ ವಿಚಾರಕ್ಕೆ ಸಂಬಂಧಿಸಿದಂತೆ ರಾಜ್ಯದ ಪರ ಸಮರ್ಥವಾಗಿ ವಾದ ಮಂಡನೆ ಮಾಡಲಿದ್ದಾರೆ ಎಂದರು.

ಪ್ರಸಕ್ತ ಸಾಲಿನ ಸಿಇಟಿ ರ್ಯಾಂಕಿಂಗ್ ಸಂಬಂಧಿಸಿ ಹೈಕೋಟ್೯ ಆದೇಶ ನೀಡಿದ್ದು, ಕೆಲವು ವಿದ್ಯಾರ್ಥಿಗಳಿಗೆ ಅನ್ಯಾಯವಾಗುತ್ತದೆ ಎನ್ನುವ ಮಾತು ಕೇಳಿ ಬಂದಿವೆ. ಕೋಟ್೯ ಆದೇಶ ಅಧ್ಯಯನ ಮಾಡಿ ವರದಿ ಸಲ್ಲಿಸಲು ಅಡ್ವಕೇಟ್ ಜನರಲ್ ಗೆ ಸೂಚಿಸಲಾಗಿದೆ ಎಂದರು.

ನೈಜ್ಯವಾಗಿ ಸಿಇಟಿ ಬರೆದ ವಿದ್ಯಾರ್ಥಿಗಳಿಗೆ ಅನ್ಯಾಯವಾಗದಂತೆ ಸರ್ಕಾರ ನೋಡಿಕೊಳ್ಳುತ್ತದೆ. ಈಗಾಗಲೇ ಈ ಕುರಿತು ಉನ್ನತ ಶಿಕ್ಷಣ ಸಚಿವರ ಜೊತೆ ಚರ್ಚಿಸಿದ್ದೇನೆ. ಎಲ್ಲ ವಿಚಾರಗಳನ್ನು ಸೂಕ್ತವಾಗಿ ಪರಿಶೀಲಿಸಿ ಸೂಕ್ತ ನಿರ್ಧಾರ ತೆಗೆದುಕೊಳ್ಳಲಾಗುತ್ತದೆ ಎಂದು ತಿಳಿಸಿದರು.

ಹುಬ್ಬಳ್ಳಿಯಲ್ಲಿ ಸ್ಥಾಪಿಸಲಾಗಿರುವ ಪ್ರಾದೇಶಿಕ ವಿಧಿ ವಿಜ್ಞಾನ ಕೇಂದ್ರ ಪ್ರಯೋಗಲಾಯನವನ್ನು ಇನಷ್ಟು ಉನ್ನತೀಕರಣಗೊಳಿಸಲಾಗುತ್ತದೆ ಎಂದು ಹೇಳಿದರು.

ಪೊಲೀಸ್ ಸಿಬ್ಬಂದಿ ಸಂಬಂಧಿಸಿದ ಅವರಾದ್ಕರ್ ವರದಿ ಅನುಷ್ಠಾನಗೊಳ್ಳುತ್ತಿದೆ. ಪೊಲೀಸ್ ಇಲಾಖೆ ಸಿಬ್ಬಂದಿಯೂ ಹೆಚ್ಚಿನ ಕೌಶಲ ಪಡೆಯಬೇಕೆಂದು, ಕಂಪ್ಯೂಟರ್ ಶಿಕ್ಷಣ ಕಡ್ಡಾಯಗೊಳಿಸಲಾಗಿದೆ. ಎಲ್ಲ ಇಲಾಖೆಯ ಸಿಬ್ಬಂದಿಗೂ ಇದು ಕಡ್ಡಾಯವಾಗಿದೆ. ಸಾರ್ವಜನಿಕ ಹಿತಾಸಕ್ತಿಗಾರಿ ಜಾರಿ ಮಾಡಲಾಗಿದೆ ಎಂದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!