Thursday, February 9, 2023

Latest Posts

ಕರ್ನಾಟಕ ವಿಧಾನಸಭೆ ಚುನಾವಣೆ: ಕಾಂಗ್ರೆಸ್ ನಿಂದ ಬಸ್ ಯಾತ್ರೆಗೆ ಮುಹೂರ್ತ ಫಿಕ್ಸ್!

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಕರ್ನಾಟಕ ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್ ಭರ್ಜರಿ ತಯಾರಿ ನಡೆಸುತ್ತಿದ್ದು, ಇದರ ಭಾಗವಾಗಿ ಬಸ್ ಯಾತ್ರೆಗೆ ಸಿದ್ದತೆ ನಡೆಸುತ್ತಿದೆ.
ಜನವರಿ 11ರಿಂದ ಕಾಂಗ್ರೆಸ್ ನಾಯಕರ ಜಂಟಿ ಬಸ್ ಯಾತ್ರೆ ಆರಂಭವಾಗಲಿದೆ. ಬೆಳಗಾವಿಯಿಂದ ಶುರುವಾಗಲಿದ್ದು, ಒಟ್ಟೂ 21 ಜಿಲ್ಲೆಗಳಲ್ಲಿ ಬಸ್ ಯಾತ್ರೆ ಸಂಚರಿಸಲಿದೆ.

ಈ ಕುರಿತು ಮಾಹಿತಿ ನೀಡಿದ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್, ಯಾವ ದಿನಾಂಕದಂದು ಎಲ್ಲಿ ಬಸ್ ಯಾತ್ರೆ ನಡೆಯಲಿದೆ ಎನ್ನುವ ರೂಟ್ ಮ್ಯಾಪ್ ತಿಳಿಸಿದ್ದಾರೆ.

ಬೆಳಗಾವಿ ಜಿಲ್ಲೆ ದೊಡ್ಡದಿರುವುದರಿಂದ 2 ವಿಭಾಗ ಮಾಡಿಕೊಂಡಿದ್ದು, ಚಿಕ್ಕೋಡಿ, ಬೆಳಗಾವಿಯಲ್ಲಿ ತಲಾ ಒಂದು ಸಭೆ ನಡೆಸಲಿದ್ದಾರೆ. ಇನ್ನು ಜನವರಿ 14, 15ರಂದು ಸಂಕ್ರಾಂತಿ ಹಬ್ಬದ ಸಲುವಾಗಿ ಯಾತ್ರೆಗೆ ವಿರಾಮ ನೀಡಲಾಗಿದೆ.

ಜನವರಿ 11ರಂದು ಬೆಳಗಾವಿ ಜಿಲ್ಲೆ
ಜನವರಿ 16ರಂದು ಹೊಸಪೇಟೆ
ಜನವರಿ 17ರಂದು ಕೊಪ್ಪಳದಲ್ಲಿ ಯಾತ್ರೆ
ಜನವರಿ 18ರಂದು ಬಾಗಲಕೋಟೆ, ಗದಗ ಜಿಲ್ಲೆಯಲ್ಲಿ ಬಸ್ ಯಾತ್ರೆ
ಜನವರಿ 19ರಂದು ಹಾವೇರಿ, ದಾವಣಗೆರೆ ಜಿಲ್ಲೆ
ಜನವರಿ 21 ಹಾಸನ, ಚಿಕ್ಕಮಗಳೂರು
ಜನವರಿ 22 ಉಡುಪಿ, ದಕ್ಷಿಣ ಕನ್ನಡ.
ಜನವರಿ 23 ಕೋಲಾರ, ಚಿಕ್ಕಬಳ್ಳಾಪುರ
ಜನವರಿ 24 ತುಮಕೂರು, ಬೆಂಗಳೂರು ಗ್ರಾಮಾಂತರ
ಜನವರಿ 25 ಚಾಮರಾಜನಗರ, ಮೈಸೂರು
ಜನವರಿ 26 ಮಂಡ್ಯ ಮತ್ತು ರಾಮನಗರ
ಜನವರಿ 27 ಯಾದಗಿರಿ-ಕಲಬುರಗಿ

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!