ವಿಧಾನಸಭೆ ಚುನಾವಣೆ: ನಾಳೆಯಿಂದ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಶುರು

ಹೊಸದಿಗಂತ ಡಿಜಿಟಲ್‌ ಡೆಸ್ಕ್‌ :

ರಾಜ್ಯ ವಿಧಾನಸಭಾ ಚುನಾವಣೆಗೆ ದಿನಗಣನೆ ಶುರುವಾಗಿದ್ದು, ನಾಳೆ ಚುನಾವಣಾ ಅಧಿಸೂಚನೆ ಹೊರಬೀಳಲಿದ್ದು, ಅಂದಿನಿಂದಲೇ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಲಿದೆ.

ಆಡಳಿತಾರೂಢ ಬಿಜೆಪಿ ಸೇರಿದಂತೆ ಪ್ರತಿಪಕ್ಷಗಳ ಅಭ್ಯರ್ಥಿಗಳ ಆಯ್ಕೆಗೆ ಇನ್ನೂ ಕಸರತ್ತು ನಡೆಯುತ್ತಿದೆ. ನಾಮಪತ್ರ ಸಲ್ಲಿಕೆಗೆ ಏ.20 ಕೊನೆಯ ದಿನವಾಗಿದೆ. ನಾಮಪತ್ರಗಳ ಪರಿಶೀಲನೆ ಏ.21ಕ್ಕೆ ನಡೆಯಲಿದ್ದು, ಉಮೇದುವಾರಿಕೆ ಹಿಂಪಡೆಯಲು ಏ.24 ಕೊನೆಯ ದಿನವಾಗಿದೆ. ಮೇ 10ರಂದು ಮತದಾನ ನಡೆಯಲಿದ್ದು, ಮೇ 13ಕ್ಕೆ ಮತ ಎಣಿಕೆ ಹಾಗೂ ಅಂದೇ ಫಲಿತಾಂಶ ಪ್ರಕಟವಾಗಲಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!