ಕನಕಪುರ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಡಿಕೆ ಸುರೇಶ್ ನಾಮಪತ್ರ ಸಲ್ಲಿಕೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್ :‌

ಕರ್ನಾಟಕ ವಿಧಾನಸಭೆ ಚುನಾವಣೆಗೆ ನಾಮಪತ್ರ ಸಲ್ಲಿಸಲು ಕೆಲವೇ ಗಂಟೆ ಬಾಕಿ ಇದ್ದು, ಈ ವೇಳೆ ಬೆಂಗಳೂರು ಗ್ರಾಮಾಂತರ ಸಂಸದ ಡಿ.ಕೆ.ಸುರೇಶ್, ಕನಕಪುರ ಕ್ಷೇತ್ರದಿಂದ ನಾಮಪತ್ರ ಸಲ್ಲಿಸಿದ್ದಾರೆ.

ಈಗಾಗಲೇ ಡಿಕೆ ಶಿವಕುಮಾರ್​ ಕನಕಪುರ ಕ್ಷೇತ್ರದಿಂದ ನಾಮಪತ್ರ ಸಲ್ಲಿದ್ದರು. ಆದರೆ ಇಂದು ಡಿಕೆ ಸುರೇಶ್​ ಸಹ ನಾಮಪತ್ರ ಸಲ್ಲಿಸಿರುವುದು ಕುತೂಹಲಕ್ಕೆ ಕಾರಣವಾಗಿದೆ.

ಬೆಳಿಗ್ಗೆ ಚನ್ನಪಟ್ಟಣದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗಂಗಾಧರ್ ನಾಮಪತ್ರ ಸಲ್ಲಿಕೆ ಪ್ರಕ್ರಿಯೆಯಲ್ಲಿ ಸುರೇಶ್ ಪಾಲ್ಗೊಂಡಿದ್ದರು. ಈ ಸಂದರ್ಭ ಪತ್ರಕರ್ತರ ಜೊತೆ ಮಾತನಾಡಿದ್ದ ಸುರೇಶ್, ಮಧ್ಯಾಹ್ನದವರೆಗೆ ಕಾದು ನೋಡಿ ಎಂದು ಮಾರ್ಮಿಕವಾಗಿ ಹೇಳಿದ್ದರು. ಅದರ ಬೆನ್ನಲ್ಲೇ ಸುರೇಶ್ ಏಕಾಏಕಿ ಕನಕಪುರದಲ್ಲಿ ನಾಮಪತ್ರ ಸಲ್ಲಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!