ಡಿ.ಕೆ. ಶಿವಕುಮಾರ್ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿದ ಶಾಸಕ‌

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

16ನೇ ವಿಧಾನಸಭೆಯ ಮೊದಲ ದಿನದ ಅಧಿವೇಶನ ಪ್ರಾರಂಭವಾಗಿದೆ. ಇಂದಿನಿಂದ ಮೂರು ದಿನಗಳ ಕಾಲ ಅಧಿವೇಶನ ನಡೆಯಲಿದ್ದು, ಮೊದಲ ಎರಡು ದಿನ 224 ನೂತನ ಶಾಸಕರು ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಹಂಗಾಮಿ ಸ್ವೀಕರ್ ಆಗಿರುವ ಆರ್​.ವಿ.ದೇಶಪಾಂಡೆ ಪ್ರತಿಜ್ಞಾವಿಧಿ ಬೋಧಿಸಲಿದ್ದಾರೆ.

ಸಭಾಧ್ಯಕ್ಷರು ಆಯ್ಕೆಯಾಗುವವರೆಗೆ ಆರ್​.ವಿ.ದೇಶಪಾಂಡೆ ಅವರು ಹಂಗಾಮಿ ಸ್ಪೀಕರ್ ಆಗಿ ನೇಮಕವಾಗಿದ್ದು, ಪ್ರಮಾಣವಚನ ಸ್ವೀಕರಿಸಿದ್ದಾರೆ. ರಾಜ್ಯಪಾಲ ಥಾವರ್​ ಚಂದ್​ ಗೆಹ್ಲೋಟ್​ ಅವರು ಪ್ರಮಾಣವಚನ ಬೋಧಿಸಿದ್ದಾರೆ. ಮೊದಲಿಗೆ ಶಾಸಕರಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಮಾಣ ವಚನ ಸ್ವೀಕರಿಸಿದ್ದಾರೆ. ವರುಣಾ ವಿಧಾನಸಭಾ ಕ್ಷೇತ್ರದ ಶಾಸಕರಾಗಿ ಸಿದ್ದರಾಮಯ್ಯ ದೇವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕಸಿದ್ದಾರೆ. ಕನಕಪುರ ಕ್ಷೇತ್ರದ ಶಾಸಕ, ಡಿಸಿಎಂ ಡಿ.ಕೆ.ಶಿವಕುಮಾರ್ ಗಂಗಾಧರ ಅಜ್ಜಯ್ಯನ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿದ್ದಾರೆ.

ಡಿಕೆಶಿ ಹೆಸರಿನಲ್ಲಿ ಪ್ರಮಾಣವಚನ ಸ್ವೀಕಾರ

ಚನ್ನಗಿರಿ ವಿಧಾನಸಭಾ ಕ್ಷೇತ್ರದ ಶಾಸಕ ಬಸವರಾಜ ಶಿವಗಂಗಾ ಡಿಸಿಎಂ ಡಿ.ಕೆ. ಶಿವಕುಮಾರ್ ಹೆಸರಿನಲ್ಲಿ ಪ್ರಮಾಣ ಸ್ವೀಕಾರ ಮಾಡಿದರು. ಇದಕ್ಕೆ ಸದನದಲ್ಲಿ ಇತರೆ ಸದಸ್ಯರಿಂದ ಆಕ್ಷೇಪ ವ್ಯಕ್ತವಾಯಿತು. ಕೂಡಲೆ ಗೊಂದಲ ಬಗೆಹರಿಸಿದ ಸ್ಪೀಕರ್, ವ್ಯಕ್ತಿ ಹೆಸರಿನ ಮೇಲೆ ಪ್ರಮಾಣ ಮಾಡಿಸದಂತೆ ವಿಧಾನಸಭೆ ಕಾರ್ಯದರ್ಶಿಗೆ ಸೂಚನೆ ನೀಡಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!