ಹೊಸದಿಗಂತ ಡಿಜಿಟಲ್ ಡೆಸ್ಕ್:
ಕರ್ನಾಟಕ ಬಂದ್ ಎಫೆಕ್ಟ್, ಮೈಸೂರಿನಲ್ಲಿ ಕೆಎಸ್‌ಆರ್‌ಟಿಸಿ ಬಸ್‌ಗಳನ್ನು ತಡೆದು ಪ್ರತಿಭಟನೆ ನಡೆಸುತ್ತಿದ್ದ ಕನ್ನಡ ಪರ ಸಂಘಟನೆಗಳ ಪ್ರತಿಭಟನಾಕಾರರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಕನ್ನಡ ಪರ ಸಂಘಟನೆಗಳ ಪ್ರತಿಭಟನೆಯಿಂದಾಗಿ ಬಸ್ ಸಂಚಾರದಲ್ಲಿ ವ್ಯತ್ಯಯ ಉಂಟಾಗಿತ್ತು. ಈ ಹಿನ್ನೆಲೆ ಪೊಲೀಸರು ಪ್ರತಿಭಟನಾಕಾರರನ್ನು ವಶಕ್ಕೆ ಪಡೆದಿದ್ದಾರೆ. ಸದ್ಯ ಬಸ್ ಸಂಚಾರ ವ್ಯವಸ್ಥೆ ಇದೀಗ ಸಹಜ ಸ್ಥಿತಿಗೆ ಮರಳಿದೆ.