ಹೊಸದಿಗಂತ ಡಿಜಿಟಲ್ ಡೆಸ್ಕ್:
ಮರಾಠಿಗರ ಕನ್ನಡ ವಿರೋಧಿ ನೀತಿ, ಕನ್ನಡಿಗರ ಮೇಲೆ ದಬ್ಬಾಳಿಕೆ ಖಂಡಿಸಿ ಇಂದು ಕರ್ನಾಟಕ ಬಂದ್‌ಗೆ ಕರೆ ನೀಡಲಾಗಿದೆ. ಆದರೆ ಬಂದ್ ಇದ್ದರೂ ಎಂದಿನಂತೆ ಕೆಎಸ್‌ಆರ್‌ಟಿಸಿ, ಬಿಎಂಟಿಸಿ ಬಸ್‌ಗಳು ಸಂಚರಿಸುತ್ತಿವೆ. ಆದರೆ ಪ್ರಯಾಣಿಕರ ಸಂಖ್ಯೆ ಸ್ಪಲ್ಪ ಇಳಿಕೆಯಾಗಿದೆ.
ರಾಮನಗರ, ಮೈಸೂರು, ಮದ್ದೂರು, ಮಂಡ್ಯ, ಚಾಮರಾಜನಗರ, ಕೊಳ್ಳೇಗಾಲ, ಟಿ.ನರಸೀಪುರ, ನಂಜನಗೂಡು, ಮಳವಳ್ಳಿ, ಕೊಡಗು, ಹಾಸನ ಭಾಗಕ್ಕೆ ಹೋಗುವವರು ಬಂದ್ ಅಂತ ಇಂದು ಮನೆಗಳಲ್ಲೇ ಉಳಿದುಕೊಂಡಿದ್ದಾರೆ. ಇದರ ಪರಿಣಾಮ ಬಸ್‌ಗಳು ಖಾಲಿ ಖಾಲಿ ಸಂಚಾರ ಮಾಡುತ್ತಿವೆ. ಬಸ್‌ಗಳಿದ್ದರೂ ಪ್ರಯಾಣಿಕರ ಸಂಖ್ಯೆ ಕಡಿಮೆಯಾಗಿದೆ.