ಹೊಸದಿಗಂತ ಡಿಜಿಟಲ್ ಡೆಸ್ಕ್;
ಮಾರ್ಚ್ 22ರಂದು ಅಖಂಡ ಕರ್ನಾಟಕ ಬಂದ್ ಗೆ ಕರೆ ನೀಡಲಾಗಿದ್ದು, ಈ ಹಿನ್ನಲೆಯಲ್ಲಿ ರಾಜ್ಯಾಧ್ಯಂತ ಸಿನಿಮಾ ಪ್ರದರ್ಶನ್ ಬಂದ್ ಮಾಡಲಾಗುತ್ತಿದೆ ಎಂಬುದಾಗಿ ಸಿನಿಮಾ ಪ್ರದರ್ಶಕರ ಸಂಘದ ಅಧ್ಯಕ್ಷ ಚಂದ್ರಶೇಖರ್ ತಿಳಿಸಿದ್ದಾರೆ.
ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ಬೆಳಗಾವಿಯಲ್ಲಿ ಕನ್ನಡಿಗರ ಮೇಲಿನ ಹಲ್ಲೆ, ಮರಾಠಿಗರ ಪುಂಡಾಟ ಖಂಡಿಸಿ ಕನ್ನಡಪರ ಸಂಘಟನೆಗಳಿಂದ ಮಾರ್ಚ್.22ರಂದು ಅಖಂಡ ಕರ್ನಾಟಕ ಬಂದ್ ಗೆ ಕರೆ ನೀಡಲಾಗಿದೆ. ಇಂತಹ ಬಂದ್ ಗೆ ಸಿನಿಮಾ ಪ್ರದರ್ಶಕರ ಸಂಘವು ಬೆಂಬಲ ನೀಡುತ್ತಿದೆ ಎಂದರು.
ಕರ್ನಾಟಕ ಬಂದ್ ಬೆಂಬಲಿಸಿ ರಾಜ್ಯಾಧ್ಯಂತ ಒಂದು ದಿನ ಸಿನಿಮಾ ಪ್ರದರ್ಶನ ಸ್ಥಗಿತಕ್ಕೆ ನಿರ್ಧರಿಸಲಾಗಿದೆ.