ಹೊಸದಿಗಂತ ಡಿಜಿಟಲ್ ಡೆಸ್ಕ್:
ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರಕ್ಕೆ ಸಂಬಂಧಿಸಿದಂತೆ ರಾಜ್ಯದಲ್ಲಿ ತೀವ್ರ ವಿರೋಧ ವ್ಯಕ್ತವಾಗಿರುವ ಹಿನ್ನೆಲೆಯಲ್ಲಿ ನಾಳೆ ರಾಜಧಾನಿ ಬೆಂಗಳೂರು ಬಂದ್ಗೆ ಕರೆ ನೀಡಲಾಗಿದೆ. ಇದರ ಬೆನ್ನಲ್ಲೇ ಸೆಪ್ಟೆಂಬರ್ 29 ರಂದು ಕರ್ನಾಟಕ ಬಂದ್ ಮಾಡಲಾಗುವುದು ಎಂದು ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಅಧಿಕೃತವಾಗಿ ಘೋಷಣೆ ಮಾಡಿದ್ದಾರೆ.
ಇಂದು ವಾಟಾಳ್ ನಾಗರಾಜ್ ನೇತೃತ್ವದಲ್ಲಿ ಕನ್ನಡಪರ ಸಂಘಟನೆಗಳು ಮಹತ್ವದ ಸಭೆ ನಡೆಸಿದರು. ಬಳಿಕ ಮಾತನಾಡಿದ ಅವರು ಸೆ.29ರ ಶುಕ್ರವಾರ ಕರ್ನಾಟಕ ಬಂದ್ ಮಾಡಲು ನಿರ್ಧರಿಸಲಾಗಿದೆ ಎಂದು ಹೇಳಿದರು.
ನಾಳೆ ಬೆಂಗಳೂರು ಬಂದ್, ಎರಡು ದಿನದ ಅಂತರದಲ್ಲಿ ಶುಕ್ರವಾರ ಕರ್ನಾಟಕ ಬಂದ್ ಗೆ ಕರೆ ನೀಡಲಾಗಿದೆ. ಬಂದ್ ಗೆ ರೈತ ಸಂಘಟನೆಗಳು, ಕನ್ನಡ ಪರ ಸಂಘಟನೆಗಳು, ಕಾರ್ಮಿಕ ಸಂಘಟನೆಗಳು ಬೆಂಬಲ ಸೂಚಿಸಿವೆ.