ಹೊಸದಿಗಂತ ಡಿಜಿಟಲ್ ಡೆಸ್ಕ್:
ಸೆಪ್ಟೆಂಬರ್ 29ರಂದು ಅಖಂಡ ಕರ್ನಾಟಕ ಬಂದ್ ನಡೆಸಲಾಗುವುದು ಎಂದು ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ್ ಹೇಳಿದರು.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸೋಮವಾರ ಈ ಬಗ್ಗೆ ಸಭೆ ನಡೆಸಿ ಅಂತಿಮ ನಿರ್ಧಾರ ತೆಗೆದುಕೊಂಡು ಅಧಿಕೃತವಾಗಿ ಘೋಷಿಸಲಾಗುವುದು ಎಂದು ತಿಳಿಸಿದರು.
ತಮಿಳುನಾಡಿಗೆ ಕಾವೇರಿ ನೀರು ಬಿಡುವುದನ್ನು ವಿರೋಧಿಸಿ ಕನ್ನಡ ರೈತ ಸಂಘಟನೆ ಸೆ.26 ರಂದು ಬೆಂಗಳೂರು ಬಂದ್ ಗೆ ಕರೆ ನೀಡಿದೆ.
ಬೆಂಗಳೂರು ಬಂದ್‌ಗೆ ಬಿಜೆಪಿಯೂ ಬೆಂಬಲ ಸೂಚಿಸಿದೆ. ಕಾವೇರಿ ಜಲ ವಿವಾದವು ರಾಜಕೀಯವನ್ನು ಮೀರಿದೆ ಎಂದು ಬಿಜೆಪಿ ಹೇಳಿದೆ.
ರೈತ ಮುಖಂಡ ಕುರುಬೂರು ಶಾಂತಕುಮಾರ್ ಅವರು ಬಂದ್‌ಗೆ ವಿವಿಧ ಸಂಘಟನೆಗಳಿಂದ ಸಹಕಾರ ಕೋರಿದ್ದಾರೆ. ಶಾಲಾ-ಕಾಲೇಜುಗಳಿಗೆ, ಫಿಲಂ ಚೇಂಬರ್ ಮತ್ತು ಐಟಿ ಕಂಪನಿಗಳಿಗೆ ರಜೆ ಘೋಷಿಸುವಂತೆ ಮನವಿ ಮಾಡಿದ್ದಾರೆ.