ಹೊಸದಿಗಂತ ಡಿಜಿಟಲ್ ಡೆಸ್ಕ್:
ವಿವಿಧ ಕನ್ನಡ ಪರ ಸಂಘಟನೆಗಳಿಂದ ಇಂದು ಕರ್ನಾಟಕ ಬಂದ್‌ಗೆ ಕರೆ ನೀಡಲಾಗಿದೆ. ಬಂದ್ ಹಿನ್ನೆಲೆಯಲ್ಲಿ ಟೌನ್‌ಹಾಲ್‌ನಿಂದ ಫ್ರೀಡಂಪಾರ್ಕ್‌ವರೆಗೂ ವಾಟಾಳ್ ನಾಗರಾಜ್ ನೇತೃತ್ವದಲ್ಲಿ ಪ್ರತಿಭಟನಾ ರ್ಯಾಲಿ ಇದೆ. ನಿಷೇಧಾಜ್ಞೆ ಜಾರಿಯಾದರೂ ರ್ಯಾಲಿ ನಡೆಸುವುದಾಗಿ ವಾಟಾಳ್ ನಿನ್ನೆ ತಿಳಿಸಿದ್ದರು. ಈ ಹಿನ್ನೆಲೆ ಮುಂಜಾಗ್ರತಾ ಕ್ರಮವಾಗಿ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ.
ಈ ಕುರಿತು ಮಾತನಾಡಿದ ಬೆಂಗಳೂರು ನಗರದ ಕ್ರೈಂ ಡಿಸಿಪಿ ಶೇಖರ್ ಹೆಚ್ ತೆಕ್ಕಣ್ಣನವರ್..”ನಾವು ಸಾಕಷ್ಟು ಬಂದೋಬಸ್ತ್ ಮಾಡಿದ್ದೇವೆ. ಯಾವುದೇ ಅಹಿತಕರ ಘಟನೆ ನಡೆಯದಂತೆ ನೋಡಿಕೊಳ್ಳುತ್ತೇವೆ” ಎಂದರು.