ನಾಳೆ ಬೆಳಿಗ್ಗೆ 6 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಕರ್ನಾಟಕ ಬಂದ್ ಪಕ್ಕಾ: ವಾಟಾಳ್ ನಾಗರಾಜ್ ಘೋಷಣೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ನಾಳೆ ಬೆಳಿಗ್ಗೆ 6 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಅಖಂಡ ಕರ್ನಾಟಕ ಬಂದ್ ಮಾಡುವುದು ಖಚಿತ. ಇದರಲ್ಲಿ ಬದಲಾವಣೆಯೇ ಇಲ್ಲ ಎಂದು ಕನ್ನಡ ಚಳುವಳಿ ಪಕ್ಷದ ವಾಟಾಳ್ ನಾಗರಾಜ್ ಘೋಷಿಸಿದ್ದಾರೆ.

ಈ ಬಗ್ಗೆ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿರುವ ಅವರು, ಮರಾಠಿಗರ ಪುಂಡಾಟಿಕೆ, ಮರಾಠಿಗರ ಅಟ್ಟಹಾಸ, ಎಂಇಎಸ್ ನಿಷೇಧ ಸೇರಿದಂತೆ ವಿವಿಧ ವಿಚಾರಗಳ ಕುರಿತು ಮಾರ್ಚ್.22ರಂದು ಅಖಂಡ ಕರ್ನಾಟಕ ಬಂದ್ ಖಚಿತವೆಂಬುದಾಗಿ ತಿಳಿಸಿದ್ದಾರೆ.

ನಾಳೆ ಬೆಳಗ್ಗೆ 6 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಅಖಂಡ ಕರ್ನಾಟಕ ಬಂದ್ ಮಾಡಲಾಗುತ್ತಿದೆ. ನಾಳೆ ಬೆಳಗ್ಗೆ 11.30 ಗಂಟೆಗೆ ಬೆಂಗಳೂರಿನ ಟೌನ್ ಹಾಲ್ ನಿಂದ ಭಾರೀ ಮೆರವಣಿಗೆಯಿಂದ ಫ್ರೀಡಂ ಪಾರ್ಕ್ ಗೆ ತೆರಳಲಾಗುತ್ತದೆ ಎಂದಿದ್ದಾರೆ.

- Advertisement - Ply
Nova

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!