Sunday, December 3, 2023

Latest Posts

ʻಕಾವೇರಿʼದ ಕಿಚ್ಚು:‌ ನೀರಿಗಾಗಿ ಇಂದು ಕರ್ನಾಟಕ ಬಂದ್

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿರುವುದನ್ನು ಖಂಡಿಸಿ ಕನ್ನಡ ಪರ, ರೈತ ಪರ ಸಂಘಟನೆಗಳು ಇಂದು ಕರ್ನಾಟಕ ಬಂದ್‌ಗೆ ಕರೆ ನೀಡಿವೆ. ಇದಕ್ಕೆ ನೂರಾರು ಸಂಘಟನೆಗಳು ತಮ್ಮ ಸಹಮತ ಸೂಚಿಸಿದ್ದು, ಕಾವೇರಿ ಹೋರಾಟಕ್ಕೆ ಇಳಿಯುವುದಾಗಿ ಈಗಾಗಲೇ ತಿಳಿಸಿದ್ದಾರೆ. ಹಾಗಾಗಿ ಇಂದು ಜನ ಜೀವನ ಅಸ್ತವ್ಯಸ್ತವಾಗುವ ಸಾಧ್ಯತೆಯಿದೆ.

ಬೀದಿಬದಿ ವ್ಯಾಪಾರಿಗಳು, ಕನ್ನಡ ಚಿತ್ರರಂಗ ಸೇರಿದಂತೆ ಅನೇಕ ಸಂಘಗಳು ಬಂದ್‌ನಲಿ ಭಾಗವಹಿಸುವುದಾಗಿ ತಿಳಿಸಿವೆ. ಆದರೆ, ಬಲವಂತದ ಬಂದ್‌ಗೆ ಅವಕಾಶವಿಲ್ಲ ಎಂದು ರಾಜ್ಯ ಗೃಹ ಸಚಿವ ಎಚ್ಚರಿಕೆ ನೀಡಿದ್ದಾರೆ. ಸಾರ್ವಜನಿಕ ಆಸ್ತ-ಪಾಸ್ತಿಗೆ ನಷ್ಟ ಉಂಟಾದರೆ ಅಂತವರ ವಿರುದ್ಧ ಕಠಿಣ ಕ್ರಮ ಕೈಗೊಲ್ಳುವುದಾಗಿ ತಿಳಿಸಿದರು. ಇನ್ನೂ ಬೆಂಗಳೂರು ನಗರದಲ್ಲಿ ಮಧ್ಯರಾತ್ರಿಯಿಂದಲೇ ನಿಷೇಧಾಜ್ಞೆ ಜಾರಿಯಾಗಿದ್ದು, ಮುಂಜಾಗ್ರತಾ ಕ್ರಮವಾಗಿ ಶಾಲಾ-ಕಾಲೇಜುಗಳಿಗೆ ರಜೆ ನೀಡಲಾಗಿದೆ.

ಇಂದು ಬೆಳಗ್ಗೆ ಆರು ಗಂಟೆಯಿಂದ ಸಂಜೆ ಆರು ಗಂಟೆವರೆಗೆ ಬಂದ್‌ ಇರಲಿದ್ದು, ಎಲ್ಲೆಡೆ ಪೊಲೀಸ್‌ ಸರ್ಪಗಾವಲು ಹೆಚ್ಚಿದೆ. ಕಾವೇರಿ ಜಲಾನಯನ ತೀರಗಳಾದ ಮಂಡ್ಯ, ಮೈಸೂರು ಭಾಗಗಳಲ್ಲಿ ಪ್ರತಿಭಟನೆ ತೀವ್ರಗೊಳ್ಳುವ ಸಾಧ್ಯತೆಯಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!