ಹೊಸದಿಗಂತ ಡಿಜಿಟಲ್ ಡೆಸ್ಕ್:
ಬೆಳಗಾವಿಯಲ್ಲಿ ಮರಾಠಿಗರ ಕಿರುಕುಳದಿಂದಾಗಿ ಕರ್ನಾಟಕ ಬಂದ್‌ಗೆ ಕರೆ ನೀಡಲಾಗಿದೆ. ಹಲವು ಸಂಘ-ಸಂಸ್ಥೆಗಳು ಬಂದ್‌ಗೆ ಬೆಂಬಲ ಸೂಚಿಸಿವೆ. ಅದೇ ರೀತಿ ಕರ್ನಾಟಕ ಬಂದ್‌ಗೆ ಚಲನಚಿತ್ರ ವಾಣಿಜ್ಯ ಮಂಡಳಿ ಕೂಡ ಬೆಂಬಲ ಕೊಟ್ಟಿದೆ.
ಇಂದು ರಾಜ್ಯಾದ್ಯಂತ ಮಾರ್ನಿಂಗ್ ಶೋಗಳು ಬಂದ್. ಮಾರ್ನಿಂಗ್ ಶೋ ಪ್ರದರ್ಶಿಸದಂತೆ ವಾಣಿಜ್ಯ ಮಂಡಳಿ ಕಡೆಯಿಂದ ಸುತ್ತೋಲೆ ಹೊರಡಿಸಲಾಗಿದೆ.
ಇದರ ಜೊತೆಗೆ ಫಿಲ್ಮ್ ಚೇಂಬರ್ನ ಮಾಜಿ ಅಧ್ಯಕ್ಷರಾದ ಸಾರಾ ಗೋವಿಂದು ಸೇರಿದಂತೆ ಚಿತ್ರರಂಗಕ್ಕೆ ಸಂಬಂಧಿಸಿದ ಹಲವರು ಹೋರಾಟದಲ್ಲಿ ಭಾಗಿ ಆಗಲಿದ್ದಾರೆ. ಟೌನ್ಹಾಲ್ ಸರ್ಕಲ್ನಿಂದ ಫ್ರೀಡಂ ಪಾರ್ಕ್ವರೆಗೆ ಮೆರವಣಿಗೆ ನಡೆಯಲಿದೆ.