ಕರ್ನಾಟಕ-ಭಾರತ್ ಗೌರವ್ ಕಾಶಿ ಯಾತ್ರೆಗೆ ಬುಕ್ಕಿಂಗ್ ಆರಂಭ: ಸರ್ಕಾರದಿಂದ ಸಿಗಲಿದೆ 5 ಸಾವಿರ ಸಹಾಯಧನ

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ರಾಜ್ಯ ಮುಜರಾಯಿ ಇಲಾಖೆಯ ಮಹತ್ವಕಾಂಕ್ಷಿ ಯೋಜನೆ ಕರ್ನಾಟಕ-ಭಾರತ್ ಗೌರವ್ ಕಾಶಿ ರೈಲು ಯಾತ್ರೆಯ ಮೂರನೇ ಟ್ರಿಪ್​ಗೆ ರಾಜ್ಯದ ಜನರಿಂದ ಉತ್ತಮ ಸ್ಪಂದನೆ ವ್ಯಕ್ತವಾಗುತ್ತಿದ್ದು, ಬುಕ್ಕಿಂಗ್ ಈಗಾಗಲೇ ಪ್ರಾರಂಭವಾಗಿದೆ.

ಸುಮಾರು 300ಕ್ಕೂ ಹೆಚ್ಚು ಟಿಕೆಟ್​ಗಳು ಭರ್ತಿಯಾಗಿವೆ ಎಂದು ಐಆರ್​ಸಿಟಿಸಿ (ಭಾರತೀಯ ರೈಲ್ವೆ ಮತ್ತು ಪ್ರವಾಸೊದ್ಯಮ ನಿಗಮ) ಅಧಿಕಾರಿಗಳು ತಿಳಿಸಿದ್ದಾರೆ.

ಕಳೆದ 2022ರ ನವೆಂಬರ್ 11 ರಂದು ಪ್ರಧಾನಿ ನರೇಂದ್ರ ಮೋದಿ ಅವರು ಉದ್ಘಾಟಿಸಿದ ಈ ಯೋಜನೆ, ಯಾತ್ರಿಕರಿಂದ ಎರಡು ಟ್ರಿಪ್​ಗಳಿಗೆ ಬಹಳಷ್ಟು ಪ್ರಶಂಸೆ ವ್ಯಕ್ತವಾಗಿದೆ. ಚಳಿಗಾಲದ ಹಿನ್ನೆಲೆಯಲ್ಲಿ ಮುಂದೂಡಲಾಗಿದ್ದ ರೈಲು ಪ್ರವಾಸವನ್ನು ಫೆ. 21ರಿಂದ ಪ್ರಾರಂಭಿಸಲು ನಿರ್ಧರಿಸಲಾಗಿದೆ. ವಾರಾಣಾಸಿ, ಅಯೋಧ್ಯೆ ಹಾಗೂ ಪ್ರಯಾಗ್‌ ರಾಜ್‌ ಧಾರ್ಮಿಕ ಸ್ಥಳಗಳಿಗೆ ಭೇಟಿ ನೀಡಲು ಉತ್ತಮ ಸಮಯವಾಗಿದೆ.

ಕರ್ನಾಟಕ ಸರ್ಕಾರದ ವತಿಯಿಂದ ಪ್ರತಿ ಯಾತ್ರಾರ್ಥಿಗೆ 5 ಸಾವಿರ ರೂ.ಗಳ ಸಹಾಯಧನ ನೀಡಲಾಗುತ್ತಿದ್ದು, ರಾಜ್ಯದ ಭಕ್ತಾದಿಗಳೂ ಈ ಅವಕಾಶವನ್ನು ಸದುಪಯೋಗಪಡಿಸಿಕೊಂಡು ದಿವ್ಯ ಕಾಶಿ, ಭವ್ಯ ಕಾಶಿಯ ವೈಭವವನ್ನು ಕಣ್ತುಂಬಿಕೊಳ್ಳಬೇಕೆಂದು ಮುಜರಾಯಿ ಹಜ್‌ ಮತ್ತು ವಕ್ಫ್‌ ಸಚಿವೆ ಶಶಿಕಲಾ ಜೊಲ್ಲೆ ಮಾಧ್ಯಮ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!