Thursday, December 8, 2022

Latest Posts

ನಾಳೆಯಿಂದ ರಾಜ್ಯ ಬಿಜೆಪಿ ಕಾರ್ಯಕಾರಿಣಿ ಸಭೆ: ಯಾರೆಲ್ಲಾ ಭಾಗವಹಿಸಲಿದ್ದಾರೆ ಗೊತ್ತಾ?

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಮೂರ್ನಾಲ್ಕು ಬಾರಿ ಕಾರಣಾಂತರಗಳಿಂದ ಮುಂದೂಡಲಾಗಿದ್ದ ರಾಜ್ಯ ಬಿಜೆಪಿ ಕಾರ್ಯಕಾರಿಣಿ ಸಭೆ ನಡೆಸಲು ಮುಹೂರ್ತ ಕೂಡಿ ಬಂದಿದೆ. ನಾಳೆಯಿಂದ (ಅಕ್ಟೋಬರ್‌ 7) ರಾಜ್ಯ ಬಿಜೆಪಿ ಕಾರ್ಯಕಾರಣಿ ಸಭೆ ನಗರದ ಅರಮನೆ ಮೈದಾನದಲ್ಲಿ ನಡೆಯಲಿದೆ. ಈ ಕುರಿತು ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ ರವಿ ನಾಳೆ ಬೆಳಗ್ಗೆ 10.30ಕ್ಕೆ ಸಭೆ ಆರಂಭವಾಗಲಿದೆ ಎಂದರು.

ಈ ಕಾರ್ಯಕ್ರಮದಲ್ಲಿ ರಾಜ್ಯಸಭಾ ಸದಸ್ಯರು, ಕರ್ನಾಟಕ ರಾಜ್ಯದ ಉಸ್ತುವಾರಿ ಸಚಿವ ಅರುಣ್‌ ಸಿಂಗ್‌, ಸಿಎಂ ಬಸವರಾಜ ಬೊಮ್ಮಾಯಿ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್‌ ಕಟೀಲ್‌, ಮಾಜಿ ಸಿಎಂ ಯಡಿಯೂರಪ್ಪ, ಗೌರವಾನ್ವಿತ ಸದಸ್ಯರು, ಮಾಜಿ ಸಂಸದರು, ಮಾಜಿ ಶಾಸಕರು, ಜಿಲ್ಲಾ ಬಿಜೆಪಿ ಅಧ್ಯಕ್ಷರು ಪದಾಧಿಕಾರಿಗಳು ಸೇರಿದಂತೆ 592ಜನ ಭಾಗವಹಿಸಲಿದ್ದಾರೆ.

ಸಭೆಯ ಉದ್ಘಾಟನೆಗೆ ಕೇಂದ್ರ ಗೃಹ ಸಚಿವ ಅಮಿತ್ ಶಾಗೆ ಆಹ್ವಾನ ನೀಡಲಾಗಿದೆ ಎಂದು ಬಿಜೆಪಿ ಮೂಲಗಳು ತಿಳಿಸಿವೆ. ಆದರೆ ಅಮಿತ್ ಶಾ ಆಗಮಿಸುವ ಬಗ್ಗೆ ಇನ್ನೂ ರಾಜ್ಯ ನಾಯಕರಿಗೆ ಖಚಿತ ಮಾಹಿತಿ ಇಲ್ಲ. ಬರುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.

 

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!