ಹೊಸದಿಗಂತ ಡಿಜಿಟಲ್ ಡೆಸ್ಕ್:
ಕರ್ನಾಟಕ ರಾಜ್ಯ ಚಲನಚಿತ್ರ ವಾಣಿಜ್ಯ ಮಂಡಳಿ ಚುನಾವಣೆಯಲ್ಲಿ ಸಾರಾ ಗೋವಿಂದು ಬಣ ಮತ್ತೊಮ್ಮೆ ಜಯಭೇರಿ ಬಾರಿಸಿದೆ. ಈ ಬಾರಿ ಫಿಲ್ಮ್ ಚೇಂಬರ್ ಅಧ್ಯಕ್ಷರಾಗಿ ಎಂ.ನರಸಿಂಹಲು ಅವರನ್ನು ಆಯ್ಕೆ ಮಾಡಲಾಗಿದೆ.
ಈ ಬಾರಿ ಅಧ್ಯಕ್ಷ ಸ್ಥಾನ ಪ್ರದರ್ಶಕರ ವಲಯಕ್ಕೆ ಮೀಸಲಾಗಿತ್ತು. ಎಂ.ನರಸಿಂಹಲು ಅವರು ತಮ್ಮ ಪ್ರತಿಸ್ಪರ್ಧಿ ಆರ್.ಸುಂದರ್ ರಾಜು ಅವರನ್ನು ಸೋಲಿಸಿ ಅಧ್ಯಕ್ಷ ಸ್ಥಾನಕ್ಕೆ ಏರಿದ್ದಾರೆ.
ಉಪಾಧ್ಯಕ್ಷ ಸ್ಥಾನಕ್ಕೆ ಸಫಾಯರ್ ವೆಂಕಟೇಶ್ ಆಯ್ಕೆಯಾಗಿದ್ದಾರೆ. ವಿತರಕ ಮತ್ತು ಪ್ರದರ್ಶಕರ ವಲಯದಿಂದ ಉಪಾಧ್ಯಕ್ಷರಾಗಿ ಶಿಲ್ಪಾ ಶ್ರೀನಿವಾಸ್, ಕಾರ್ಯದರ್ಶಿಯಾಗಿ ಎಂ.ಎನ್.ಕುಮಾರ್, ಪ್ರದರ್ಶಕರ ಉಪಾಧ್ಯಕ್ಷ ಕೆ.ರಂಗಪ್ಪ, ಕಾರ್ಯದರ್ಶಿ ಕುಶಾಲ್, ಮಹದೇವ್ ಚುನಾಯಿತರಾಗಿದ್ದಾರೆ.