ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯದ ಜನತೆ ಕಾಯುತ್ತಿರುವ ಬಹುನಿರೀಕ್ಷಿತ ಬಜೆಟ್ ಇನ್ನೇನು ಕೆಲವೇ ಗಂಟೆಗಳಲ್ಲಿ ಶುರುವಾಗಲಿದೆ. ಇಂದು ಬೆಳಗ್ಗೆ 10.15ಕ್ಕೆ ಬಜೆಟ್ ಮಂಡನೆಯಾಗಲಿದ್ದು, ಆರ್ಥಿಕ ಸಚಿವರು ಕೂಡ ಆಗಿರುವ ಸಿಎಂ ಬಸವರಾಜ ಬೊಮ್ಮಾಯಿಯವರು ಈ ಬಾರಿ ರಾಜ್ಯ ಸರ್ಕಾರದ ಕೊನೆಯ ಬಜೆಟ್ ಅನ್ನು ಮಂಡನೆ ಮಾಡಲಿದ್ದಾರೆ.
ಇಂದು ಮಂಡನೆಯಾಗಲಿರುವ ಬಜೆಟ್‌ನಲ್ಲಿ ಯಾವೆಲ್ಲ ರೀತಿಯಲ್ಲಿ ಜನಪ್ರಿಯ ಯೋಜನೆಗಳನ್ನು ಘೋಷಣೆ ಮಾಡಲಿದ್ದಾರೆ ಎನ್ನುವುದನ್ನು ಕಾದು ನೋಡಬೇಕಾಗಿದೆ. ಈ ಬಾರಿಯ ರಾಜ್ಯ ಬಜೆಟ್ ರೈತರ ಪಾಲಿಗೆ ವರದಾನವಾಗುತ್ತದೆಯೇ? ಎಲ್ಲ ಸಮುದಾಯಗಳ ಜನರ ಲಕ್ಷ್ಯ ಇಂದಿನ ಬಜೆಟ್ ಮೇಲಿದೆ.
ಏಳನೇ ವೇತನ ಆಯೋಗದ ಅನುಷ್ಠಾನ, ರೈತರಿಗೆ ಶೂನ್ಯ ಬಡ್ಡಿದರದಲ್ಲಿ ಸಾಲ, ಮಹಿಳೆಯರ ಮತಗಳನ್ನು ಸೆಳೆಯಲು ವಿಶೇಷ ಪ್ಯಾಕೇಜ್ ಘೋಷಿಸುವ ಸಾಧ್ಯತೆಯಿದೆ. ತೆರಿಗೆ ಸಂಗ್ರಹ, ಆದಾಯದಲ್ಲಿ ಹೆಚ್ಚಳದಿಂದಾಗಿ ಈ ವರ್ಷ ಸರ್ಕಾರಕ್ಕೆ ಉತ್ತಮ ಬಜೆಟ್ ಮಂಡಿಸಲು ಅನುವು ಮಾಡಿಕೊಡುತ್ತದೆ.