ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯದ ಮುಂದಿನ ಆರ್ಥಿಕ ದಿಕ್ಕನ್ನು ನಿರ್ಧರಿಸುವ ಕರ್ನಾಟಕ ಬಜೆಟ್ 2026ನ್ನು ಮಾರ್ಚ್ ಮೊದಲ ವಾರದಲ್ಲಿ ಮಂಡಿಸುವ ಸಾಧ್ಯತೆ ದಟ್ಟವಾಗಿದೆ. ಸರ್ಕಾರದ ಉನ್ನತ ಮಟ್ಟದ ಮೂಲಗಳ ಪ್ರಕಾರ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಜೆಟ್ ದಿನಾಂಕ ಹಾಗೂ ಅಧಿವೇಶನ ಕುರಿತಂತೆ ಹಿರಿಯ ಅಧಿಕಾರಿಗಳೊಂದಿಗೆ ಪ್ರಾಥಮಿಕ ಚರ್ಚೆ ನಡೆಸಿದ್ದಾರೆ.
ಯೋಜನೆಯಂತೆ ಎಲ್ಲವೂ ಸಗಟಾಗಿ ನಡೆದರೆ, ಮಾರ್ಚ್ 5ರಿಂದ ವಿಧಾನ ಮಂಡಲದ ಬಜೆಟ್ ಅಧಿವೇಶನ ಆರಂಭವಾಗುವ ನಿರೀಕ್ಷೆ ಇದೆ. ಅಧಿವೇಶನದ ಮೊದಲ ದಿನ ರಾಜ್ಯಪಾಲರು ಜಂಟಿ ಅಧಿವೇಶನ ಉದ್ದೇಶಿಸಿ ಭಾಷಣ ಮಾಡುವ ಸಾಧ್ಯತೆ ಇದ್ದು, ಅದರ ಮುಂದಿನ ದಿನವಾದ ಮಾರ್ಚ್ 6ರಂದು ಮುಖ್ಯಮಂತ್ರಿ ಹಾಗೂ ಹಣಕಾಸು ಸಚಿವರೂ ಆಗಿರುವ ಸಿದ್ದರಾಮಯ್ಯ ಬಜೆಟ್ ಮಂಡನೆ ಮಾಡಲಿದ್ದಾರೆ.
ಇದನ್ನೂ ಓದಿ: FOOD | ಎಷ್ಟು ಬೇಗ ರೆಡಿ ಆಗುತ್ತೆ ನೋಡಿ ಈ ಮಶ್ರೂಮ್ ಸ್ಯಾಂಡ್‌ವಿಚ್! ಒಮ್ಮೆ ಟ್ರೈ ಮಾಡಿ
ರಾಜಕೀಯ ವಲಯದಲ್ಲಿ ಮುಖ್ಯಮಂತ್ರಿ ಸ್ಥಾನಕ್ಕೆ ಸಂಬಂಧಿಸಿದ ಚರ್ಚೆಗಳು ನಡೆಯುತ್ತಿದ್ದರೂ, ಆಡಳಿತಾತ್ಮಕವಾಗಿ ಸರ್ಕಾರ ಬಜೆಟ್ ಸಿದ್ಧತೆಯಲ್ಲಿ ತೊಡಗಿಸಿಕೊಂಡಿದೆ. ಸಿದ್ದರಾಮಯ್ಯ ಈಗಾಗಲೇ 16 ಬಾರಿ ರಾಜ್ಯ ಬಜೆಟ್ ಮಂಡಿಸಿರುವ ದಾಖಲೆ ಹೊಂದಿದ್ದು, ಮಾರ್ಚ್‌ನಲ್ಲಿ ಮಂಡಿಸುವ ಬಜೆಟ್ ಅವರ 17ನೇ ಬಜೆಟ್ ಆಗಲಿದೆ. ಇದು ರಾಜ್ಯ ರಾಜಕೀಯದಲ್ಲಿ ಮತ್ತೊಂದು ದಾಖಲೆಯಾಗಿ ಗಮನ ಸೆಳೆಯಲಿದೆ.

