ಹೊಸದಿಗಂತ ಡಿಜಿಟಲ್ ಡೆಸ್ಕ್:
ಸಂಡೂರು ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಅನ್ನಪೂರ್ಣ ತುಕಾರಾಂ ಭರ್ಜರಿ ಗೆಲುವು ಸಾಧಿಸಿದ್ದಾರೆ. ಅಧಿಕೃತ ಘೋಷಣೆಯೊಂದೇ ಬಾಕಿ ಉಳಿದಿದೆ.
ಅನ್ನಪೂರ್ಣ 9 ಸಾವಿರಕ್ಕೂ ಹೆಚ್ಚು ಮತಗಳಿಂದ ಗೆದ್ದಿದ್ದಾರೆ. ಬಿಜೆಪಿ ಅಭ್ಯರ್ಥಿ ಬಂಗಾರು ಹನುಮಂತ ಸೋಲೊಪ್ಪಿಕೊಂಡಿದ್ದಾರೆ.
ಮತ ಎಣಿಕೆ ಕೇಂದ್ರದ ಬಳಿ ಕಾರ್ಯಕರ್ತರು ಅಭ್ಯರ್ಥಿಗಳ ಗೆಲುವಿನ ಸಂಭ್ರಮ ಆಚರಿಸುತ್ತಿದ್ದಾರೆ. ಸಿಎಂ ಸಿದ್ದರಾಮಯ್ಯ ಸೇರಿದಂತೆ ಕಾಂಗ್ರೆಸ್ ನಾಯಕರ ಪರ ಜೈಕಾರ ಹಾಕಿದ್ದಾರೆ.
ಸೋಲೊಪ್ಪಿಕೊಂಡಿರುವ ಹನುಮಂತ ಅವರು, ಧರ್ಮದ ಮೇಲೆ ಅಧರ್ಮವು ಜಯಗಳಿಸಿದೆ, ಸೋಲನ್ನು ಸವಾಲಾಗಿ ಸ್ವೀಕರಿಸುತ್ತೇವೆ. ಹಣಬಲದ ಮೇಲೆ ಕಾಂಗ್ರೆಸ್ ಜಯಭೇರಿ ಬಾರಿಸಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.