ಹೊಸದಿಗಂತ ಡಿಜಿಟಲ್ ಡೆಸ್ಕ್:
ಚನ್ನಪಟ್ಟಣ, ಶಿಗ್ಗಾಂವಿ, ಸಂಡೂರು ಕ್ಷೇತ್ರಗಳ ಮತ ಎಣಿಕೆ ಬೆಳಗ್ಗೆ 8 ಗಂಟೆಗೆ ಆರಂಭವಾಗಿದ್ದು, ಇಂದು ಅಂತಿಮ ತೆರೆ ಬೀಳಲಿದೆ.
ಕಳೆದ ಒಂದು ತಿಂಗಳಿನಿಂದ ರಾಜಕೀಯ ಕೆಸರರೆಚಾಟಕ್ಕೆ ಕಾರಣವಾಗಿದ್ದ ವಿವಾದಾತ್ಮಕ ಹೇಳಿಕೆಗಳಿಗೆ ಸಾಕ್ಷಿಯಾಗಿದ್ದ ಉಪಚುನಾವಣೆಯ ಫಲಿತಾಂಶ ಇಂದು ಪ್ರಕಟವಾಗಲಿದೆ.
ರಾಮನಗರದ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಚನ್ನಪಟ್ಟಣ ಕ್ಷೇತ್ರದ ಮತ ಎಣಿಕೆ ನಡೆಯುತ್ತಿದ್ದರೆ, ಸಂಡೂರು ಕ್ಷೇತ್ರದ ಮತ ಎಣಿಕೆ ಬಳ್ಳಾರಿಯ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ನಡೆಯುತ್ತಿದೆ. ಮುಂಜಾಗ್ರತಾ ಕ್ರಮವಾಗಿ ಮತ ಎಣಿಕೆ ಕೇಂದ್ರದ ಸುತ್ತಮುತ್ತ ಬಿಗಿ ಭದ್ರತೆ ಕೈಗೊಳ್ಳಲಾಗಿದೆ.