Karnataka ByPolls Result | ಶಿಗ್ಗಾಂವಿ ಕ್ಷೇತ್ರದ ಉಪ ಚುನಾವಣೆ ಮತ ಎಣಿಕೆ ಆರಂಭ

ಹೊಸದಿಗಂತ ಹಾವೇರಿ :

ಶಿಗ್ಗಾಂವ ಉಪ ಚುನಾವಣೆ ಮತ ಎಣಿಕೆ ದೇವಗಿರಿಯ ಸರ್ಕಾರಿ ಇಂಜಿನೀಯರಿಂಗ್ ಕಾಲೇಜಿನಲ್ಲಿ ಆರಂಭಗೊಂಡಿತು. ಮತಗಳ ಎಣಿಕೆ ಕಾರ್ಯಕ್ಕಾಗಿ ಒಟ್ಟು 14 ಟೇಬಲ್ ಇವಿಎಂ ಎಣಿಕೆಗೆ, 1 ಟೇಬಲ್ ಅಂಚೆ ಮತಪತ್ರ ಹಾಗೂ 1 ಟೇಬಲ್ ಸೇವಾ ಮತದಾರರ ಅಂಚೆ ಮತಪತ್ರ ಎಣಿಕೆಗಾಗಿ ಸಿದ್ದಪಡಿಸಿದ್ದು, ಪ್ರತಿ ಟೇಬಲ್‌ಗೆ ಒಬ್ಬರು ಎಣಿಕೆ ಮೇಲ್ವಿಚಾರಕರು, ಒಬ್ಬರು ಎಣಿಕೆ ಸಹಾಯಕರು ಹಾಗೂ ಒಬ್ಬರು ಎಣಿಕೆ ಮೈಕ್ರೋ ಅಬ್ಸರ್ವರ್ ನೇಮಕ ಮಾಡಲಾಗಿದೆ.

ಮತಪೆಟ್ಟಿಗೆಗಳನ್ನು ಇಟ್ಟಿದ್ದ ಸ್ಟ್ರಾಂಗ್ ರೂಮ್ ಅನ್ನು ಜಿಲ್ಲಾ ಚುನಾವಣಾಧಿಕಾರಿ, ಜಿಲ್ಲಾಧಿಕಾರಿ ಡಾ.ವಿಜಯಮಹಾಂತೇಶ ದಾನಮ್ಮನವರ, ಚುನಾವಣಾಧಿಕಾರಿ ಮಹಮ್ಮದ್ ಖೀಜರ್, ಮೈಕ್ರೋ ಅಬ್ಸರ್ವರ್ ಮೀನಾ, ಪೊಲೀಸ್ ವರಿಷ್ಠಾಧಿಕಾರಿ ಅಂಶಕುಮಾರ ಹಾಗೂ ಅಭ್ಯರ್ಥಿಗಳ ಏಜೆಂಟರ ಸಮ್ಮುಖದಲ್ಲಿ ತೆರೆಯಲಾಯಿತು. ಮತ ಎಣಿಕೆ ಕೇಂದ್ರ 200 ಮೀ. ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಮಾಡಲಾಗಿದೆ.

ಶೇ. 80.48 ಮತದಾನ: ಈ ಉಪಚುನಾವಣೆಯಲ್ಲಿ ಶೇ. 80.72ರಷ್ಟು ಮತದಾನವಾಗಿದ್ದು 98,642 ಪುರುಷರು, 92,522 ಮಹಿಳೆಯರು, ಇತರೆ ಇಬ್ಬರು ಸೇರಿ 1,91,166 ಮತದಾರರು ಹಕ್ಕು ಚಲಾಯಿಸಿದ್ದು, ಫಲಿತಾಂಶ ತೀವ್ರ ಕುತೂಹಲ ಮೂಡಿಸಿದೆ.

8 ಅಭ್ಯರ್ಥಿಗಳು ಕಣದಲ್ಲಿದ್ದು ಮಧ್ಯಾಹ್ನ ದ ಹೊತ್ತಿಗೆ ಅದೃಷ್ಟ ಯಾರಿಗೆ ಒಲಿಯಲಿದೆ ಎಂಬುದು ಖಚಿತವಾಗಲಿದೆ..

- Advertisement - Prestige

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!