ಹೊಸದಿಗಂತ ಬಳ್ಳಾರಿ:
ಸಂಡೂರು ಎಸ್ಟಿ ಮೀಸಲು ವಿಧಾನಸಭೆ ಕ್ಷೇತ್ರದ ಉಪಚುನಾವಣೆ ಮತ ಎಣಿಕೆ ಕಾರ್ಯ ನಡೆಯುತ್ತಿದ್ದು, ಬಿಜೆಪಿ ಅಭ್ಯರ್ಥಿ ಬಂಗಾರು ಹನುಮಂತು, ಕಾಂಗ್ರೆಸ್ ಅಭ್ಯರ್ಥಿ ಅನ್ನಪೂರ್ಣ ತುಕಾರಾಂ ಸೇರಿದಂತೆ 6 ಜನ ಅಭ್ಯರ್ಥಿಗಳು ಅದೃಷ್ಟ ಪರೀಕ್ಷೆಗೆ ಇಳಿದಿದ್ದಾರೆ.
ಮೊದಲ ಸುತ್ತಿನ ಎಣಿಕೆ ಕಾರ್ಯ ಬಹುತೇಕ ಪೂರ್ಣಗೊಂಡಿದ್ದು, ಕಾಂಗ್ರೆಸ್ ಅಭ್ಯರ್ಥಿ ಅನ್ನಪೂರ್ಣ ತುಕಾರಾಂ ಅವರು ಮುನ್ನಡೆ ಕಾಯ್ದುಕೊಂಡಿದ್ದಾರೆ.
ಕಾಂಗ್ರೆಸ್ ಅಭ್ಯರ್ಥಿ ಅನ್ನಪೂರ್ಣ ತುಕಾರಾಂ ಅವರು, ಮೊದಲ ಸುತ್ತಿನಲ್ಲಿ 6959 ಮತಗಳನ್ನು ಪಡೆದಿದ್ದು, ಬಿಜೆಪಿ ಅಭ್ಯರ್ಥಿ ಬಂಗಾರು ಹನುಮಂತು ಅವರು 4373 ಮತಗಳನ್ನು ಪಡೆದಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಅನ್ನಪೂರ್ಣ ತುಕಾರಾಂ ಅವರು 2586 ಮತಗಳಿಂದ ಮುನ್ನಡೆ ಕಾಯ್ದುಕೊಂಡಿದ್ದಾರೆ.
ಕಾಂಗ್ರೆಸ್ ಅಭ್ಯರ್ಥಿ ಅನ್ನಪೂರ್ಣ ತುಕಾರಾಂ ಅವರು, ಎರಡನೇ ಸುತ್ತಿನಲ್ಲೂ 11,770 ಮತಗಳನ್ನು ಪಡೆದಿದ್ದು, ಬಿಜೆಪಿ ಅಭ್ಯರ್ಥಿ ಬಂಗಾರು ಹನುಮಂತು ಅವರು 9055 ಮತಗಳನ್ನು ಪಡೆದಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಅನ್ನಪೂರ್ಣ ತುಕಾರಾಂ ಅವರು, 2715 ಮತಗಳ ಅಂತರದಿಂದ ಮುನ್ನಡೆ ಕಾಯ್ದುಕೊಂಡಿದ್ದಾರೆ.