ಹೊಸದಿಗಂತ ಡಿಜಿಟಲ್ ಡೆಸ್ಕ್:
ನಾಳೆ ನಿಗದಿಯಾಗಿದ್ದ ಸಚಿವ ಸಂಪುಟ ಸಭೆಯನ್ನು ಮುಂದೂಡಲಾಗಿದೆ. ಶುಕ್ರವಾರ ಬೆಳಗ್ಗೆ 11 ಗಂಟೆಗೆ ಸಚಿವ ಸಂಪುಟ ಸಭೆ ನಡೆಸಲು ತೀರ್ಮಾನ ಮಾಡಲಾಗಿದೆ. ಹಾಗಾಗಿ ನಾಳೆ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಘೋಷಣೆಯಾಗುವುದಿಲ್ಲ.
ಐದು ಗ್ಯಾರಂಟಿ ಯೋಜನೆಗಳ ಜಾರಿ ಹಿನ್ನೆಲೆಯಲ್ಲಿ ಇಂದು ಎಲ್ಲಾ ಸಚಿವರುಗಳು ಮತ್ತು ಸಂಬಂಧಪಟ್ಟ ಇಲಾಖೆಗಳ ಹಿರಿಯ ಅಧಿಕಾರಿಗಳ ಜತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾಹಿತಿ ಸಂಗ್ರಹಿಸುತ್ತಿದ್ದಾರೆ. ಗ್ಯಾರಂಟಿ ಯೋಜನೆ ಅನುಷ್ಠಾನದ ಕುರಿತು ಸರ್ಕಾರ ಇನ್ನೂ ಗೊಂದಲದಲ್ಲೇ ಇದೆ ಎನ್ನಲಾಗಿದೆ. ಹಾಗಾಗಿ ಕ್ಯಾಬಿನೆಟ್ ಸಭೆಯನ್ನು ಶುಕ್ರವಾರಕ್ಕೆ ಮುಂದೂಡಲಾಗಿದೆಯೇ ಎಂಬ ಪ್ರಶ್ನೆ ಎದುರಾಗಿದೆ.
ನಾಳೆಯೂ ಕೂಡಾ ಅಧಿಕಾರಿಗಳ ಜತೆ ಸಿಎಂ ಸಭೆ ನಡೆಸಿ ಶುಕ್ರವಾರ ನಡೆಯುವ ಕ್ಯಾಬಿನೆಟ್ ಸಭೆಯಲ್ಲಿ ಚರ್ಚಿಸಿ ನಂತರ ಗ್ಯಾರಂಟಿ ಯೋಜನೆ ಅನುಷ್ಠಾನದ ಬಗ್ಗೆ ತೀರ್ಮಾನ ಕೈಗೊಳ್ಳಲಿದ್ದಾರೆ ಎಂದು ತಿಳಿದು ಬಂದಿದೆ.