ಹೊಸದಿಗಂತ ಡಿಜಿಟಲ್ ಡೆಸ್ಕ್:
ಎಂಜಿನಿಯರಿಂಗ್ ಸೇರಿದಂತೆ ವಿವಿಧ ವೃತ್ತಿಪರ ಕೋರ್ಸ್‌ಗಳ ಪ್ರವೇಶಾತಿಗಾಗಿ ಸಿಇಟಿ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿಗಳ ಫಲಿತಾಂಶವನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಇಂದು ಪ್ರಕಟಿಸಿದೆ. ಈ ಬಾರಿಯೂ ಬಾಲಕಿಯರೇ ಮೇಲುಗೈ ಸಾಧಿಸಿದ್ದಾರೆ.
ಉನ್ನತ ಶಿಕ್ಷಣ ಸಚಿವ ಸುಧಾಕರ್ ಸಿಇಟಿ ಫಲಿತಾಂಶವನ್ನು ಪ್ರಕಟಿಸಿದ್ದು, ಇಂಜಿನಿಯರಿಂಗ್ ವಿಭಾಗದಲ್ಲಿ ವಿಘ್ನೇಶ್ ಪ್ರಥಮ ಸ್ಥಾನ ಪಡೆದರೆ, ಅರ್ಜುನ್ ಕೃಷ್ಣಸ್ವಾಮಿ ದ್ವಿತೀಯ ಸ್ಥಾನ, ಸಮೃದ್ಧ್ ಶೆಟ್ಟಿ 3 ನೇ ಸ್ಥಾನ, ಎಸ್. ಸುಮೇಧ್ ಗೆ 4 ನೇ ಸ್ಥಾನ ಮತ್ತು ಮಾಧವ ಸೂರ್ಯ 5ನೇ ಸ್ಥಾನ ಪಡೆದಿದ್ದಾರೆ.
ಫಲಿತಾಂಶವು ಬೆಳಿಗ್ಗೆ 11ರ ನಂತರ ಕೆಇಎ ವೆಬ್‌ಸೈಟ್ http://kea.kar.nic.in ದಲ್ಲಿ ಸಿಗಲಿದೆ ಎಂದು ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕಿ ಎಸ್. ರಮ್ಯಾ ತಿಳಿಸಿದ್ದಾರೆ.
ಫಲಿತಾಂಶ ವೀಕ್ಷಿಸುವುದು ಹೇಗೆ?
ಫಲಿತಾಂಶ ಪ್ರಕಟವಾದ ನಂತರ ವಿದ್ಯಾರ್ಥಿಗಳು ತಮ್ಮ ನೋಂದಣಿ ಸಂಖ್ಯೆ ಮತ್ತು ಜನ್ಮ ದಿನಾಂಕದ ಮೂಲಕ ಅದನ್ನು ಡೌನ್‌ಲೋಡ್ ಮಾಡಬಹುದು. KCET ಸ್ಕೋರ್ ಕಾರ್ಡ್ ಅನ್ನು ಅಧಿಕೃತ ವೆಬ್‌ಸೈಟ್‌ಗಳಾದ kea.kar.nic.in, cetonline.karnataka.gov.in ಮತ್ತು karresults.nic.in ನಿಂದ ಡೌನ್‌ಲೋಡ್ ಮಾಡಿಕೊಳ್ಳಬಹುದು. ಅಭ್ಯರ್ಥಿಗಳು ತಮ್ಮ ಕರ್ನಾಟಕ CET ಫಲಿತಾಂಶ 2023 ಅನ್ನು ಪಡೆಯಲು ತಮ್ಮ ನೋಂದಣಿ ಸಂಖ್ಯೆಯನ್ನು ನಮೂದಿಸಬೇಕು.